ಸಚಿವ ಕೃಷ್ಣ ಭೈರೇಗೌಡ ಎದುರೇ ಹೈಡ್ರಾಮಾ; ಬೆಂಗಳೂರಲ್ಲಿ ಕಾಂಗ್ರೆಸ್ ಮಾಜಿ ಎಮ್ಎಲ್ಸಿ, ಬಿಜೆಪಿ ಎಮ್ಎಲ್ಎ ಕೈಕೈ ಮಿಲಾಯಿಸೋ ಹಂತಕ್ಕೆ ಗಲಾಟೆ!
ವೈಟ್‌ಫೀಲ್ಡ್‌ನ ಟಿನ್ ಫ್ಯಾಕ್ಟರಿ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಕೃಷ್ಣ ಭೈರೇಗೌಡರ ಸಮ್ಮುಖದಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ತೀವ್ರ ಘರ್ಷಣೆ ನಡೆದಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕೊರತೆ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾಗ ಈ ಜಟಾಪಟಿ ಶುರುವಾಗಿದೆ. ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.
ಬೆಂಗಳೂರು, ನವೆಂಬರ್ 07: ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಟಿನ್ ಫ್ಯಾಕ್ಟರಿ ಬಳಿ ನಡೆದ ವಾರ್ಡ್ ಒನ್ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಕೃಷ್ಣ ಭೈರೇಗೌಡರ ಮುಂದೆಯೇ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ತೀವ್ರ ರಾಜಕೀಯ ಘರ್ಷಣೆ ನಡೆದಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಪ್ರಮುಖ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ಶಾಸಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದಾಗ ಗಲಾಟೆ ಶುರುವಾಯಿತು. ಸಚಿವರು ಹಾಜರಿದ್ದರೂ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಪರಸ್ಪರ ಮಾತಿನ ಚಕಮಕಿ ನಡೆಸಿ, ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 07, 2026 11:56 AM
Follow Us

