ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ: ಬಿಎಸ್ ಯಡಿಯೂರಪ್ಪ

ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 16, 2024 | 4:49 PM

ವಕ್ಫ್ ಭೂಮಿಗಳ ವಿವಾದಕ್ಕೆ ಸಂಬಂಧಿಸಿದಂತೆ ರೈತರ ಪರವಾಗಿ ಹೋರಾಡಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಮೂರು ತಂಡಗಳನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಚಿಸಿದ್ದಾರೆ, ತಂಡಗಳು ರಾಜ್ಯಾದ್ಯಂತ ಹೋರಾಟ ನಡೆಸಿ ವರದಿಯನ್ನು ಸಲ್ಲಿಸಲಿವೆ ಎಂದು ಯಡಿಯೂರಪ್ಪ ಹೇಳಿದರು.

ಶಿವಮೊಗ್ಗ: ಉಪ ಚುನಾವಣೆ ನಡೆದ ಎಲ್ಲ ಮೂರು ಕ್ಷೇತ್ರಗಳಲ್ಲೂ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸುವುದು ಶತಸಿದ್ಧ, ಚುನಾವಣೆಗೆ ಮೊದಲು ತಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ, ಮೂರು ಕ್ಷೇತ್ರಗಳಿಗೂ ತಾನು ಭೇಟಿ ನೀಡಿದ್ದು ನಿರೀಕ್ಷೆಗೂ ಮೀರಿದ ಬೆಂಬಲ ಸಿಕ್ಕಿದೆ, ಹಿಂದೆ ಯಾವ ರೀತಿಯಲ್ಲಿ ಬಿಜೆಪಿಗೆ ಬೆಂಬಲ ಸಿಗುತ್ತಿತ್ತೋ ಈಗಲೂ ಅದೇ ತೆರನಾದ ಒಲವು ಜನ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಧಾನಿ ಮೋದಿಯವರ ಹೆಸರು, ದೇವೇಗೌಡರ ಪ್ರಯತ್ನ ನಿಖಿಲ್​ನನ್ನು ಗೆಲ್ಲಿಸಲಿದೆ: ಬಿಎಸ್ ಯಡಿಯೂರಪ್ಪ