ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಆಗಿರೋದು ಸುಖಕ್ಕಾಗಿ ಅಲ್ಲ; ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು: ಬಿವೈ ವಿಜಯೇಂದ್ರ

ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಆಗಿರೋದು ಸುಖಕ್ಕಾಗಿ ಅಲ್ಲ; ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 12, 2024 | 5:08 PM

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಜಯೇಂದ್ರ ಸುಖಕ್ಕೋಸ್ಕರ ಸರ್ಕಾರ ನಡೆಸುತ್ತಿರುವವರು ಕಾಂಗ್ರೆಸ್ ನಾಯಕರು, ಅವರಿಗೆ ರೈತರು, ದಲಿತರು, ಬಡವರು, ಶ್ರಮಿಕರು ಬರದಿಂದ ಜರ್ಜರಿತರಾಗಿರುವ ಜನತೆಯ ಬಗ್ಗೆ ಅವರಿಗೆ ಒಂದಿಷ್ಟೂ ಕಾಳಜಿಯಿಲ್ಲ ಎಂದು ಹೇಳಿದರು

ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ (BJP-JDS Alliance) ಮಾಡಿಕೊಂಡಿರುವುದು ಯಾವುದೋ ಸುಖಕ್ಕೋಸ್ಕರ ಅಲ್ಲ, ರಾಜ್ಯ ಮತ್ತು ರಾಷ್ಟ್ರದ ಹಿತದೃಷ್ಟಿಯಿಂದ ಮತ್ತು ನರೇಂದ್ರ ಮೋದಿಯವರು (Narendra Modi) ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ಎಂಬ ಉದ್ದೇಶದೊಂದಿಗೆ ಜೆಡಿಎಸ್ ನಾಯಕರು ಎನ್ ಡಿಎ ತೆಕ್ಕೆಗೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸುಖಕ್ಕೋಸ್ಕರ ಸರ್ಕಾರ ನಡೆಸುತ್ತಿರುವವರು ಕಾಂಗ್ರೆಸ್ ನಾಯಕರು, ಅವರಿಗೆ ರೈತರು, ದಲಿತರು, ಬಡವರು, ಶ್ರಮಿಕರು ಬರದಿಂದ ಜರ್ಜರಿತರಾಗಿರುವ ಜನತೆಯ ಬಗ್ಗೆ ಅವರಿಗೆ ಒಂದಿಷ್ಟೂ ಕಾಳಜಿಯಿಲ್ಲ ಎಂದು ಹೇಳಿದರು. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಮತ್ತು ಹಾಸನ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲ್ಲ ಅಂತ ಪದೇಪದೆ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಯಾರೇನೇ ಹೇಳಿದರೂ ಅದು ಗಣನೆಗೆ ಬರಲ್ಲ, ಅಭ್ಯರ್ಥಿಗಳನ್ನು ಬಿಜೆಪಿ ವರಿಷ್ಠರು ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಚರ್ಚೆ ನಡೆಸಿ ಅಂತಿಮಗೊಳಿಸಲಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ