ಹಿರಿಯೂರು ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ: ಇಲ್ಲಿದೆ ಜೆಡಿಎಸ್, ಬಿಜೆಪಿ ನಾಯಕರ ಸಭೆಯ ವಿವರ
ಹಿರಿಯೂರು ವಿಧಾನಸಭೆ ಉಪಚುನಾವಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಏರ್ಪಟ್ಟಿದ್ದ ಗೊಂದಲವನ್ನು ಸರಿ ಮಾಡಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಂದಾಗಿದ್ದು, ಈ ಸಂಬಂಧ ಇಂದು (ನವೆಂಬರ್ 26) ಮಹತ್ವದ ಸಭೆ ನಡೆಸಿದ್ದಾರೆ. ದೋಸ್ತಿ ಮುಂಬರುವ ವಿಧಾನಸಭಾ ಚುನಾವಣೆವರೆಗೂ ಚೆನ್ನಾಗಿರಬೇಕೆಂದು ಈ ಸಭೆ ಮಾಡಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಇನ್ನು ಈ ಸಭೆಯಲ್ಲಿ ಹಿರಿಯೂರು ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ದೆಹಲಿ ನಾಯಕರ ಜೊತೆ ಮತ್ತೊಂದು ಸುತ್ತಿನ ಸಮಾಲೋಚನೆಯ ನಂತರ ಅಭ್ಯರ್ಥಿ ಹೆಸರು ಅಂತಿಮಗೊಳಿಸುವ ಬಗ್ಗೆ ತೀರ್ಮಾನವಾಗಿದೆ.
ಬೆಂಗಳೂರು, ನವೆಂಬರ್ 26: ಹಿರಿಯೂರು ವಿಧಾನಸಭೆ ಉಪಚುನಾವಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಏರ್ಪಟ್ಟಿದ್ದ ಗೊಂದಲವನ್ನು ಸರಿ ಮಾಡಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಂದಾಗಿದ್ದು, ಈ ಸಂಬಂಧ ಇಂದು (ನವೆಂಬರ್ 26) ಮಹತ್ವದ ಸಭೆ ನಡೆಸಿದ್ದಾರೆ. ದೋಸ್ತಿ ಮುಂಬರುವ ವಿಧಾನಸಭಾ ಚುನಾವಣೆವರೆಗೂ ಚೆನ್ನಾಗಿರಬೇಕೆಂದು ಈ ಸಭೆ ಮಾಡಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಇನ್ನು ಈ ಸಭೆಯಲ್ಲಿ ಹಿರಿಯೂರು ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ದೆಹಲಿ ನಾಯಕರ ಜೊತೆ ಮತ್ತೊಂದು ಸುತ್ತಿನ ಸಮಾಲೋಚನೆಯ ನಂತರ ಅಭ್ಯರ್ಥಿ ಹೆಸರು ಅಂತಿಮಗೊಳಿಸುವ ಬಗ್ಗೆ ತೀರ್ಮಾನವಾಗಿದೆ. ಇನ್ನು ಸಭೆ ಬಳಿಕ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

