ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ರಾಜ್ಯ ಸರ್ಕಾರದ ಜೊತೆ ಕೈಜೋಡಿಸುವ ಕೆಲಸ ಮಾಡುತ್ತಿದ್ದಾರೆ: ದೇವೇಗೌಡ

|

Updated on: Feb 15, 2025 | 6:58 PM

ಈಗಲೂ ಅನಾರೋಗ್ಯದಿಂದ ಬಳಲುತ್ತಿರುವ ದೇವೇಗೌಡರು ಎರಡು ದಿನಗಳ ಹಿಂದೆ ರಾಜ್ಯಸಭೆಯಲ್ಲಿ ಕರ್ಣಾಟಕದ ಸಮಸ್ಯೆಗಳನ್ನು ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಸದನದ ಗಮನಕ್ಕೆ ತಂದಿದ್ದರು ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಳಕಳಿಯಿಂದ ವಿನಂತಿಸಿಕೊಂಡಿದ್ದರು.

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ರಾಜ್ಯ ಸರ್ಕಾರದ ಕೆಲ ಮಂತ್ರಿಗಳು ಮತ್ತು ಶಾಸಕರು, ದೆಹಲಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಸದರು ರಾಜ್ಯದ ಸಮಸ್ಯೆಗಳಿಗಾಗಿ ಹೋರಾಡುತ್ತಿಲ್ಲ ಎಂದು ಪದೇಪದೆ ಹೇಳುವುದನ್ನು ಖಂಡಿಸಿದರು. ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಅವರು ಹಾಗೆ ಮಾತಾಡೋದು ತಪ್ಪು, ಕರ್ನಾಟಕದಿಂದ ಸಂಸದರಾಗಿ ಮತ್ತು ರಾಜ್ಯಸಭಾಗೆ ಆಯ್ಕೆಯಾಗಿರುವ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸುಮ್ಮನೆ ಕೂತಿಲ್ಲ, ರಾಜ್ಯದ ಸಮಸ್ಯೆಗಳಿಗಾಗಿ ಹೋರಾಡುತ್ತಿದ್ದಾರೆ ಎಂದು ಸ್ಪಷ್ವವಾದ ಮಾತುಗಳಲ್ಲಿ ಹೇಳಿದರು. ಈ ಪಕ್ಷಗಳ ಸಂಸದರು ರಾಜ್ಯ ಸರ್ಕಾರ ನಡೆಸುವ ಹೋರಾಟಗಳಲ್ಲಿ ಕೈಜೋಡಿಸುತ್ತಿದ್ದಾರೆ ಎಂದು ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜ್ವರದಿಂದ ಬಳಲುತ್ತಿದ್ದರೂ ಅಧಿವೇಶನದಲ್ಲಿ ಭಾಗಿಯಾಗಿ ಬೆಂಗಳೂರು ನಿವಾಸಿಗಳ ನೀರಿನ ಬವಣೆ ವಿವರಿಸಿದ ದೇವೇಗೌಡ

Published on: Feb 15, 2025 06:05 PM