AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Padayatra: ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ

BJP Padayatra: ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ

ಕಿರಣ್​ ಹನಿಯಡ್ಕ
| Edited By: |

Updated on:Sep 01, 2026 | 8:27 AM

Share

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಹಣ ವಾಪಸ್‌ ಆಗ್ರಹಿಸಿ ಬಿಜೆಪಿ ಇಂದಿನಿಂದ ಬಳ್ಳಾರಿ ಚಲೋ ಪಾದಯಾತ್ರೆ ಆರಂಭಿಸಿದೆ. ರಾಯಚೂರಿನ ಲಿಂಗಸುಗೂರಿನಿಂದ ಆರಂಭವಾಗಿ 10 ದಿನಗಳಲ್ಲಿ 170 ಕಿ.ಮೀ. ಸಾಗುವ ಈ ಯಾತ್ರೆಗೆ ಬಿ.ವೈ. ವಿಜಯೇಂದ್ರ ಮುಂದಾಳತ್ವ ವಹಿಸಿದ್ದಾರೆ. ಇದಕ್ಕೆ ಪ್ರತಿತಂತ್ರ ರೂಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಲ್ಯಾಣ ಕರ್ನಾಟಕದ ಶಾಸಕರ ಸಭೆ ಕರೆದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 1: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ ನಂತರವೂ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಹಗರಣದ ಹಣ ಸಂಪೂರ್ಣವಾಗಿ ವಾಪಸ್ ಬರಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಇಂದು ಈ ಪಾದಯಾತ್ರೆ ಆರಂಭವಾಗುತ್ತಿದ್ದು, 10 ದಿನಗಳ ಕಾಲ ಸುಮಾರು 170 ಕಿಲೋಮೀಟರ್ ದೂರ ಸಾಗಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪಾದಯಾತ್ರೆಯಲ್ಲಿ ಮಾಜಿ ಸಚಿವ ಶ್ರೀರಾಮುಲು, ಆರ್. ಅಶೋಕ್ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ. ಈ ಯಾತ್ರೆಯು ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಲಿದೆ. ಲಿಂಗಸುಗೂರು, ಮಸ್ಕಿ, ಸಿಂಧನೂರು (ರಾಯಚೂರು), ಕಾರಟಗಿ, ಗಂಗಾವತಿ (ಕೊಪ್ಪಳ), ಕಂಪ್ಲಿ ಮತ್ತು ಸಂಡೂರು (ಬಳ್ಳಾರಿ) ಕ್ಷೇತ್ರಗಳಲ್ಲಿ ಪಾದಯಾತ್ರೆ ಸಾಗಿ, ನಂತರ ಬಳ್ಳಾರಿಯಲ್ಲಿ ಸಮಾವೇಶದೊಂದಿಗೆ ಮುಕ್ತಾಯಗೊಳ್ಳಲಿದೆ.

ಬಿಜೆಪಿಯ ಈ ಪಾದಯಾತ್ರೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಲ್ಯಾಣ ಕರ್ನಾಟಕದ ಮೂರು ಜಿಲ್ಲೆಗಳ ಶಾಸಕರ ಸಭೆ ಕರೆದಿದ್ದಾರೆ. ಬಿಜೆಪಿ ಪಾದಯಾತ್ರೆ ಶುರುವಾದ ನಂತರ ‘ಕೌಂಟರ್ ಅಟ್ಯಾಕ್‌ಗೆ ಸಿದ್ಧರಿರಿ’ ಎಂದು ಶಾಸಕರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 01, 2026 08:07 AM

Follow Us