AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಮಾಜಿ ಸಿಎಂ ಸಿದ್ದರಾಮಯ್ಯ

‘ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರಸನ್ನ ಗಾಂವ್ಕರ್​
| Edited By: |

Updated on: Nov 05, 2026 | 5:51 PM

Share

ಎಸ್​​ಐಆರ್​​ ಇಲ್ಲದಿದ್ದರೆ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು, ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. 2029ರಲ್ಲಿ ಯಾವ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ. ದೇಶದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕಡಿಮೆಯಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.

ಬೆಂಗಳೂರು, ನವೆಂಬರ್​​ 05: ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿಯವರು ಗೆಲ್ಲಲಾಗಲ್ಲ. ದೇಶದಲ್ಲಿ ಎಸ್​ಐಆರ್​​ ವಿರುದ್ಧದ ಈ ಹೋರಾಟ ಎರೆನೇ ಸಂಗ್ರಾಮ. ಇದರಲ್ಲಿ ನಾವು ಯಶಸ್ಸು ಗಳಿಸುತ್ತೇವೆ. 2029ರಲ್ಲಿ ಯಾವ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ. ದೇಶದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕಡಿಮೆಯಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಎಸ್​ಐಆರ್​​ ವಿರೋಧಿಸಿ ಕಾಂಗ್ರೆಸ್ ನಡೆಸಿದ​​ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇಶಾದ್ಯಂತ ಎಸ್​​ಐಆರ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ. ಅದಕ್ಕಾಗಿ SIR ರದ್ದಾಗಬೇಕು. ಸಿಇಸಿ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಜ್ಞಾನೇಶ್ ಕುಮಾರ್ ಆಯ್ಕೆ ಆಗಿದ್ದು ಹೇಗೆ ಗೊತ್ತಾ? ಎಂದು ವಿವರಣೆ ನೀಡಿದ ಅವರು, 2024ರಲ್ಲಿ ಲೋಕಸಭಾ ಚುನಾವಣೆಯಲ್ಲಿ NDA 240 ಸ್ಥಾನ ಮಾತ್ರ ಗೆಲ್ತು. ಬಿಜೆಪಿಗೆ ಮೆಜಾರಿಟಿ ಬರಲಿಲ್ಲ, ಅದಕ್ಕೋಸ್ಕರ ಮೋದಿ, ಅಮಿತ್ ಶಾ ಕುತಂತ್ರ ಮಾಡಿದ್ರು. ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಇತಿಹಾಸ ಸರಿ ಇಲ್ಲ. ಜ್ಞಾನೇಶ್ ಕುಮಾರ್ ಕೇರಳದಲ್ಲಿ ಐಎಎಸ್ ಅಧಿಕಾರಿಯಾಗಿದ್ರು. ಆಯ್ಕೆ ಸಮತಿಯಲ್ಲಿ ಪ್ರಧಾನಿ, ಸಿಜೆಐ, ವಿಪಕ್ಷ ನಾಯಕರು ಇರ್ತಾರೆ. ಆದರೆ ಇವರನ್ನು ಆಯ್ಕೆ ಮಾಡುವ ಮೊದಲೇ ಸಮಿತಿ ಬದಲಾಯಿಸ್ತಾರೆ. ಸಿಜೆಐ ತೆಗೆದು ಸಂಪುಟದವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳುತ್ತಾರೆ. ಇದಕ್ಕೆ ರಾಹುಲ್ ಗಾಂಧಿ ವಿರೋಧ ಮಾಡ್ತಾರೆ. ಆದರೂ ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡ್ತಾರೆ. ಆಮೇಲೆ ಎಸ್​ಐಆರ್ ಏಕಮುಖವಾಗಿ ಮಾಡುವ ಮೂಲಕ ಜ್ಞಾನೇಶ್ ಕುಮಾರ್​ ಅವರನ್ನು ಬಿಜೆಪಿಯ ಕೈಗೊಂಬೆ ಮಾಡಿಕೊಳ್ತಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More