ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್

Edited By:

Updated on: Jun 18, 2026 | 10:50 AM

ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ಬಾರಿ ಟಿಕೆಟ್ ವಂಚಿತರಾಗಿದ್ದ ಅವರು, ಪಕ್ಷದ ತೀರ್ಮಾನದಿಂದ ಈ ಬಾರಿ ಗೆಲ್ಲುವುದಾಗಿ ಹೇಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಬೆಂಬಲದ ಬಗ್ಗೆಯೂ ಮಾತನಾಡಿದ ಲಿಂಗರಾಜ್ ಪಾಟೀಲ್, ಕಾಂಗ್ರೆಸ್​ನಲ್ಲಿ ಗೊಂದಲವಿದೆ, ಬಿಜೆಪಿಯಲ್ಲಿ ಆತಂಕವಿಲ್ಲ ಎಂದಿದ್ದಾರೆ.

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ಪಕ್ಷದ ತೀರ್ಮಾನದಂತೆ ಮತದಾರರು ಮತ ಹಾಕುತ್ತಾರೆ” ಎಂದು ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾವು ಮತ್ತು ರಘು ಅವರು ಜೊತೆಯಾಗಿ ಗೆಲ್ಲುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮಗೆ ಮತ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಲಿಂಗರಾಜ್ ಪಾಟೀಲ್, ಯತ್ನಾಳ್ ಅವರು ತಮ್ಮ ಆಪ್ತರು ಮತ್ತು ಪಕ್ಷದ ನಾಯಕರು ಅವರೊಂದಿಗೆ ಮಾತನಾಡಿದ್ದಾರೆ. ಹೀಗಾಗಿ, ಅವರು ಖಂಡಿತವಾಗಿಯೂ ತಮ್ಮ ಪರವಾಗಿ ಮತ ಚಲಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More