ಬಿಜೆಪಿಯಿಂದ ಇಂದು ಧರ್ಮಸ್ಥಳ ಚಲೋ ಬೃಹತ್ ಸಮಾವೇಶ: ವೀರೇಂದ್ರ ಹೆಗ್ಗಡೆ ಭೇಟಿಯಾದ ಆರ್ ಅಶೋಕ್

Updated on: Sep 01, 2025 | 10:05 AM

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿ ನಾಯಕರು ಇಂದು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸೋಮವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದು, ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು., ವಿಡಿಯೋ ಇಲ್ಲಿದೆ.

ಮಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಮತ್ತು ಇದನ್ನು ಖಂಡಿಸಿ ಕರ್ನಾಟಕ ಬಿಜೆಪಿ ಇಂದು ಧರ್ಮಸ್ಥಳ ಚಲೋ ಹಮ್ಮಿಕೊಂಡಿದೆ. 1 ಲಕ್ಷ ಜನ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮಧ್ಯಾಹ್ನ 2 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ದೇವಸ್ಥಾನದ ಹೊರವಲಯದಲ್ಲಿರುವ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಭಾಗಿಯಾಗಲಿದ್ದಾರೆ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಆರ್ ಅಶೊಕ್ ಭಾಗವಹಿಸಲಿದ್ದಾರೆ. 2 ಸಾವಿರ ಬಸ್ 10,000 ಕ್ಕೂಅಧಿಕ ಕಾರುಗಳಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಆಗಮಿಸಲಿದ್ದಾರೆ. ಇದರ ಅಂಗವಾಗಿ ಆರ್ ಅಶೋಕ್ ಧರ್ಮಸ್ಥಳದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 01, 2025 09:20 AM