ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಕ್ರಮ: ವಿಜಯೇಂದ್ರ

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಕ್ರಮ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on:Dec 07, 2024 | 7:29 PM

ಶಿವರಾಂ ಹೆಬ್ಬಾರ್ ಕೆಲ ತಿಂಗಳುಗಳಿಂದ ಮೌನವಾಗಿದ್ದಾರೆ, ಹೇಳಿಕೆಗಳನ್ನು ನೀಡಿಲ್ಲ, ಅದರೆ ಸೋಮಶೇಖರ್ ಸಮಯ ಸಿಕ್ಕಾಗಲೆಲ್ಲ ರಾಜ್ಯ ಬಿಜೆಪಿ ನಾಯಕತ್ವ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರವಾಗಿ ಮತ ಯಾಚಿಸಿದ್ದು ಗುಟ್ಟಾಗೇನೂ ಉಳಿದಿಲ್ಲ.

ಬೆಂಗಳೂರು: ಪಕ್ಷದ ಕೋರ್ ಕಮಿಟಿ ಮೀಟಿಂಗ್ ನಂತರ ಮಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಬಿಜೆಪಿ ಶಾಸಕರಾದ ಅರಬೈಲ್ ಶಿವರಾಂ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು. ಅವರಿಬ್ಬರೂ ಬಿಜೆಪಿ ಟಿಕೆಟ್ ಗಳಿಂದ ಗೆದ್ದು ಶಾಸಕರಾಗಿದ್ದರೂ ಕಾಂಗ್ರೆಸ್ ಪಾಳೆಯದಲ್ಲಿ ಹೆಚ್ಚಿಗೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ, ಇಬ್ಬರ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಇವತ್ತಿನ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಜಯೇಂದ್ರಗೆ ಜನಬೆಂಬಲವಿದೆ, ಅವರನ್ನು ರಾಜ್ಯಾಧ್ಯಕ್ಷ ಮಾಡಿದ್ದು ಪಕ್ಷದ ವರಿಷ್ಠರು, ನಾನಲ್ಲ: ಯಡಿಯೂರಪ್ಪ

Published on: Dec 07, 2024 07:29 PM