ಮೈಸೂರು ಮತ್ತು ಬೆಂಗಳೂರು ನಡುವೆ ಓಡಾಡುವ ಟಿಪ್ಪು ಎಕ್ಸ್ ಪ್ರೆಸ್ (Tipu Express) ಇನ್ನು ಮುಂದೆ ಒಡೆಯರ್ ಎಕ್ಸ್ ಪ್ರೆಸ್ (Wodeyar Express) ಅಂತ ಕರೆಸಿಕೊಳ್ಳುತ್ತದೆ. ತಮ್ಮ ಆಗ್ರಹಕ್ಕೆ ಮನ್ನಣೆ ನೀಡಿದ ರೇಲ್ವೇ ಸಚಿವ ಆಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅಭಿನಂದಿಸಿ ಧನ್ಯವಾದ ಸಲ್ಲಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಸಹ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾಯಿಸಿದ್ದಕ್ಕೆ ಕಿಡಿಕಾರಿದ್ದಾರೆ. ತಾಳಗುಪ್ಪ-ಮೈಸೂರು ನಡುವಿನ ಪ್ಯಾಸೆಂಜರ್ ಟ್ರೇನನ್ನು ಕುವೆಂಪು ಎಕ್ಸ್ ಪ್ರೆಸ್ ಆಗಿ ಮರುನಾಮಕರಣ ಮಾಡಲಾಗಿದೆ.