ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿದರೆ ನಾವು ಸತ್ಯವನ್ನು ಆಧಾರವಾಗಿಸಿಕೊಂಡು ಪ್ರಚಾರ ಮಾಡುತ್ತೇವೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 06, 2024 | 12:32 PM

ಚಾಮರಾಜನಗರ, ಮೈಸೂರು-ಕೊಡಗು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ಮಾಡಿದ್ದಾರೆ. ಈ ಬಾರಿಯ ಪ್ರಚಾರ ವೈಖರಿ ಬದಲಾಗಲಿದೆಯೇ? ಪ್ರಚಾರ ಕಾರ್ಯ ಹೇಗಿರಲಿದೆ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಬಿಜೆಪಿ ನಾಯಕರು ಸುಳ್ಳಿನ ಮೇಲೆ ಪ್ರಚಾರ ಮಾಡುತ್ತಾರೆ ಅದರೆ ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡಲಿದೆ ಎಂದು ಹೇಳಿದರು.

ಬೆಂಗಳೂರು: ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯವನ್ನು ಇಂದು ಅಧಿಕೃತವಾಗಿ ಆರಂಭಿಸುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬ್ರೀಫಾಗಿ ಮಾತಾಡಿದರು. ಪ್ರಚಾರ (campaigning) ಇಂದಿನಿಂದ ಶುರುವಾಗಲಿದೆಯಾ ಅಂತ ಕೇಳಿದ್ದಕ್ಕೆ ಅವರು, ಅದು ಈಗಾಗಲೇ ಆರಂಭವಾಗಿದೆ ಆದರೆ ಇಂದು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ (Kurudumale Ganesh Temple) ಪೂಜೆ ಸಲ್ಲಿಸಿದ ಬಳಿಕ ಮುಳುಬಾಗಿಲುನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು. ಸಿದ್ದರಾಮಯ್ಯ ಈಗಾಗಲೇ ಕೆಲ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿರುವುದನ್ನು ಕನ್ನಡಿಗರು ನೋಡಿದ್ದಾರೆ. ಚಾಮರಾಜನಗರ, ಮೈಸೂರು-ಕೊಡಗು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ಮಾಡಿದ್ದಾರೆ. ಈ ಬಾರಿಯ ಪ್ರಚಾರ ವೈಖರಿ ಬದಲಾಗಲಿದೆಯೇ? ಪ್ರಚಾರ ಕಾರ್ಯ ಹೇಗಿರಲಿದೆ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಬಿಜೆಪಿ ನಾಯಕರು ಸುಳ್ಳಿನ ಮೇಲೆ ಪ್ರಚಾರ ಮಾಡುತ್ತಾರೆ ಅದರೆ ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡಲಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    1999ರಲ್ಲಿ ಎಸ್​.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಮೊಳಗಿಸಿದ್ದರು, ನಾವೂ ಮತ್ತೆ ಇಲ್ಲಿಂದಲೇ ಪಾಂಚಜನ್ಯ ಮೊಳಗಿಸ್ತೇವೆ -ಡಿ.ಕೆ.ಶಿವಕುಮಾರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.