ಮುಸ್ಲಿಂ ವಿದ್ಯಾವಂತರೇ ಟೆರರಿಸ್ಟ್ ಆಗ್ತಿರೋದು ಅಪಾಯಕಾರಿ: ಮಾಜಿ ಸಂಸದ ಪ್ರತಾಪ್ ಸಿಂಹ
ಬಡತನ ಅಥವಾ ನಿರುದ್ಯೋಗವಲ್ಲ, ಬದಲಿಗೆ ಧರ್ಮಾಂಧತೆ ಮತ್ತು ದೇಶ ವಿರೋಧಿ ಮನಸ್ಥಿತಿಯೇ ದೆಹಲಿಯಲ್ಲಿ ನಡೆದಂತಹ ಘಟನೆಗಳಿಗೆ ಕಾರಣ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ವಿದ್ಯಾವಂತರು ಸಹ ಭಯೋತ್ಪಾದನೆಯಲ್ಲಿ ತೊಡಗಿಕೊಳ್ಳುತ್ತಿದ್ದು, ನೆರೆಹೊರೆಯವರ ಬಗ್ಗೆ ಎಚ್ಚರ ವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.
ಮೈಸೂರು, ನವೆಂಬರ್ 12: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ. ಮುಸ್ಲಿಮರ ಸಮಸ್ಯೆ ಬಡತನ ಅಲ್ಲ, ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೇ ಇಂತಹ ಘಟನೆಗಳಿಗೆ ಕಾರಣ. ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೇ ಅವರ ಕೆಲಸ. ವಿದ್ಯಾವಂತ ಮುಸ್ಲಿಮರು ಉಗ್ರರಾದರೆ ಅವರನ್ನ ಪತ್ತೆ ಹಚ್ಚುವುದು ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದೇಶವನ್ನು ಮುಸ್ಲಿಂ ರಾಷ್ಟ್ರ ಏನಾದರೂ ಮಾಡುತ್ತಾರಾ? ಇಂತಹ ನಾಯಕರು ಇರೋವರೆಗೆ ಈ ಪರಿಸ್ಥಿತಿಯನ್ನ ಎದುರಿಸಬೇಕು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 12, 2025 01:18 PM
