ಮೇಲ್ಮನೆ ಮೇಲಾಟ: ಕಾಂಗ್ರೆಸ್ ಕ್ಯಾಂಪ್ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು
7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಇದರ ಮಧ್ಯೆ ಬಿಜೆಪಿಯ ಉಚ್ಛಾಟಿತ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳೆಯದಲ್ಲಿ ಗುರುತಿಸಿಕೊಂಡಿರುವುದು ಸಂಚಲನಕ್ಕೆ ಕಾರಣವಾಗಿದೆ.
ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಇದರ ಮಧ್ಯೆ ಬಿಜೆಪಿಯ ಉಚ್ಛಾಟಿತ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳೆಯದಲ್ಲಿ ಗುರುತಿಸಿಕೊಂಡಿರುವುದು ಸಂಚಲನಕ್ಕೆ ಕಾರಣವಾಗಿದೆ.
ಹೌದು….ಏಳನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದ್ದು, ಕೆಲ ಜೆಡಿಎಸ್ ಹಾಗೂ ಬಿಜೆಪಿಯಿಂದ ಗೆದ್ದಿರುವ ಶಾಸಕರನ್ನು ಸೆಳೆಯು ಯತ್ನ ನಡೆಸಿದೆ. ಇದರ ನಡುವೆ ಬಿಜೆಪಿಯ ಇಬ್ಬರು ಉಚ್ಛಾಟಿತ ಶಾಸಕರು, ಕಾಂಗ್ರೆಸ್ ಶಾಸಕರಿರುವ ವಂಡರ್ ಲಾ ರೆಸಾರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.

