ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ

Updated on: Feb 09, 2026 | 2:39 PM

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷದವರು ಬೆಂಗಳೂರಿನಲ್ಲಿ ಹಾಕಿದ ಫ್ಲೆಕ್ಸ್‌ಗಳಿಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ದೂರು ದಾಖಲಿಸಿದೆ. ಅಮೆರಿಕ ಜತೆ ವ್ಯಾಪಾರ ಒಪ್ಪಂದ ಮಾಡಿಕೊಂಡ ವಿಚಾರವಾಗಿ ಅಲ್ಲಿನ ಅಧ್ಯಕ್ಷ ‘ಡೊನಾಲ್ಡ್ ಟ್ರಂಪ್​ಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್​ಗಳನ್ನು ಹಾಕಲಾಗಿತ್ತು. ಇದರ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್​​ಗಳಲ್ಲಿ ನಮೂದಿಸಲಾಗಿತ್ತು. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಮಾಜಿ ಎಂಎಲ್ಸಿ ತುಳಸಿ ಮುನಿರಾಜು ಗೌಡ ಸೇರಿದಂತೆ ಕೆಲವು ಬಿಜೆಪಿ ನಾಯಕರು ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿಗೆ ಈ ಕುರಿತು ಔಪಚಾರಿಕ ದೂರು ಸಲ್ಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More