Karnataka Budget 2023: ಕಳೆದ ಬಾರಿಯ ಮುಂಗಡ ಪತ್ರದಲ್ಲಿ ಘೋಷಿಸಿದ ಕಾರ್ಯಕ್ರಮಗಳ ಪೈಕಿ 57 ಅನ್ನು ಸರ್ಕಾರ ಅನುಷ್ಠಾನಗೊಳಿಸಿಲ್ಲ: ಸಿದ್ದರಾಮಯ್ಯ
ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಪುನಃ ಸುಳ್ಳು ಭರವಸೆಗಳ ಬಜೆಟ್ ಮಂಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ಸದನದಲ್ಲಿ ಬಜೆಟ್ ಮಂಡಿಸಿದ ನಂತರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ 2023-24 ಸಾಲಿನ ಮುಂಗಡ ಪತ್ರವನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎಂದು ಬಣ್ಣಿಸಿದರು. ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದ ಕಾರ್ಯಕ್ರಮಗಳ (projects) ಪೈಕಿ 57 ಅನ್ನು ಸರ್ಕಾರ ಅನುಷ್ಠಾನಗೊಳಿಸಲಿಲ್ಲ. ಹಾಗೆಯೇ, 2018ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ (manifesto) 600 ಭರವಸೆಗಳನ್ನು ನೀಡಿತ್ತು. ಆದರೆ ಅವುಗಳಲ್ಲಿ ಶೇಕಡ 90 ರಷ್ಟು ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಪುನಃ ಸುಳ್ಳು ಭರವಸೆಗಳ ಬಜೆಟ್ ಮಂಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 17, 2023 04:50 PM