ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಮತ್ತು ಕಡುಭ್ರಷ್ಟ ಸರ್ಕಾರ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Feb 15, 2023 | 12:30 PM

ಇದೊಂದು ಲಜ್ಜೆಗೆಟ್ಟ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಸರ್ಕಾರ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಈಗ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯ ಹಿಂದೆಂದೂ ಕಾಣದ ಅತಿ ಕೆಟ್ಟ ಮತ್ತು ಭ್ರಷ್ಟ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು. ನಗರದಲ್ಲಿ ಇಂದು ಪತ್ರಿಕಾ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಅವರು, ವಿರೋಧ ಪಕ್ಷ (opposition party) ಮಾಡುವ ಎಲ್ಲ ಆರೋಪಗಳಿಗೆ ದಾಖಲಾತಿ ಕೇಳುತ್ತಾರೆ. ಅವರ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಹೆಚ್ ವಿಶ್ವನಾಥ್ ಆರೋಪಗಳನ್ನು ಮಾಡಿದ್ದಾರೆ. ಹಾಗಾದರೆ ಅವರು ಹೇಳುತ್ತಿರೋದು ಸುಳ್ಳಾ? ತಮ್ಮ ಕೈಯಲ್ಲಿರುವ ದಾಖಲಾತಿ ಸುಳ್ಳೇ? ಎಂದು ಸಿದ್ದರಾಮಯ್ಯ ಹೇಳಿದರು. ಇದೊಂದು ಲಜ್ಜೆಗೆಟ್ಟ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಸರ್ಕಾರ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.