ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ; ದೀರ್ಘದಂಡ ನಮಸ್ಕಾರ ಹಾಕಿದ ಅಭಿಮಾನಿ
ಲೋಕಸಭಾ ಚುನಾವಣೆ(Lok Sabha Election)ಯ ಮತ ಎಣಿಕೆ ಮುಗಿದು ನಿನ್ನೆಯೇ ಫಲಿತಾಂಶ ಹೊರ ಬಂದಿದೆ. ಈ ಚುನಾವಣೆಯಲ್ಲಿ ಬಿಜೆಪಿ(Bjp)ಗೆ ಅಧಿಕ ಸ್ಥಾನ ಬಂದರೆ ಮನೆಯಿಂದ ಮಠದವರೆಗೂ ದೀರ್ಘದಂಡ ನಮಸ್ಕಾರ ಹಾಕುವ ಹರಕೆ ಹೊತ್ತಿದ್ದ ಬಿಜೆಪಿ ಅಭಿಮಾನಿ ಯುವಕ ಇಂದು(ಜೂ.05) ಹರಕೆ ತೀರಿಸಿದ್ದಾನೆ.
ವಿಜಯಪುರ, ಜೂ.05: ಲೋಕಸಭಾ ಚುನಾವಣೆ(Lok Sabha Election)ಯ ಮತ ಎಣಿಕೆ ಮುಗಿದು ನಿನ್ನೆ(ಜೂ.04)ಯೇ ಫಲಿತಾಂಶ ಹೊರ ಬಂದಿದೆ. ಈ ಚುನಾವಣೆಯಲ್ಲಿ ಬಿಜೆಪಿ(Bjp)ಗೆ ಅಧಿಕ ಸ್ಥಾನ ಬಂದರೆ ಮನೆಯಿಂದ ಮಠದವರೆಗೂ ದೀರ್ಘದಂಡ ನಮಸ್ಕಾರ ಹಾಕುವ ಹರಕೆ ಹೊತ್ತಿದ್ದ ಬಿಜೆಪಿ ಅಭಿಮಾನಿ ಯುವಕ ಇಂದು ಹರಕೆ ತೀರಿಸಿದ್ದಾನೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಶಿವು ಮಂಗಳೂರು ಎಂಬ ಬಿಜೆಪಿ ಪಕ್ಷದ ಅಭಿಮಾನಿ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ ಬಂದರೆ ಕೊಲ್ಹಾರ ಪಟ್ಟಣದಲ್ಲಿರುವ ತಮ್ಮ ಮನೆಯಿಂದ ಪಟ್ಟಣದ ದಿಗಂಭರೇಶ್ವರ ಮಠದವರೆಗೂ ದೀರ್ಘ ದಂಡ ನಮಸ್ಕಾರ ಹಾಕುವ ಹರಕೆ ಕಟ್ಟಿಕೊಂಡಿದ್ದ. ಹಾಗಾಗಿ ಫಲಿತಾಂಶ ಬಂದಿದ್ದು, ಬಿಜೆಪಿ ಅಧಿಕ ಸ್ಥಾನಗಳನ್ನು ಗಳಿಸಿದ ಹಿನ್ನಲೆ ಇಂದು ತಮ್ಮ ಮನೆಯಿಂದ 2 ಕಿಲೋ ಮೀಟರ್ ದೂರದಲ್ಲಿರುವ ಈ ದಿಗಂಭರೇಶ್ವರ ಮಠದವರೆಗೂ ದೀರ್ಘದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದ್ದಾರೆ. ದೀರ್ಘ ದಂಡ ನಮಸ್ಕಾರ ಹಾಕುತ್ತಾ ಮಠ ತಲುಪಿದ ಬಳಿಕ ಮಠದಲ್ಲಿ ಪೂಜೆ ಮಾಡಲಾಯಿತು. ಈ ವೇಳೆ ಮಾಜಿ ಸಚಿವ ಎಸ್ಕೆ ಬೆಳ್ಳುಬ್ಬಿ ಪತ್ನಿ ಕಸ್ತೂರಿ ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

