ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಮನಗಂಡೇ ವರಿಷ್ಟರು ಶೆಟ್ಟರ್ ರನ್ನು ವಾಪಸ್ಸು ಸೇರಿಸಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ

|

Updated on: Jan 26, 2024 | 5:09 PM

ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ನೆಚ್ಚಿಕೊಂಡರೆ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ ಅನ್ನೋದನ್ನು ಮನಗಂಡಿರುವ ಬಿಜೆಪಿ ವರಿಷ್ಠರು ಶೆಟ್ಟರ್ ಅವರನ್ನು ವಾಪಸ್ಸು ಬರಮಾಡಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು.

ಕಲಬುರಗಿ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇರೋದು ಬಿಜೆಪಿ ವರಿಷ್ಠರಿಗೆ ಅರ್ಥವಾಗಿದೆ ಎಂದು ಹೇಳಿದರು. ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಬಿಜೆಪಿಗೆ ವಾಪಸ್ಸು ಕರೆದೊಯ್ದಿರುವುದು ಈ ಅಂಶವನ್ನು ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದರು. ನಿನ್ನೆ ಬಿಜೆಪಿ ಸೇರಿದ ಬಳಿಕ ಶೆಟ್ಟರ್ ಆಡಿದ ಮಾತುಗಳನ್ನು ಗಮನಿಸಿ; ಕಾಂಗ್ರೆಸ್ ಪಕ್ಷದ ನಾಯಕರು (Congress party) ನನ್ನನ್ನು ಚೆನ್ನಾಗಿ ನಡೆಸಿಕೊಂಡು ಸೂಕ್ತ ಸ್ಥಾನಮಾನಗಳನ್ನು ನೀಡಿ ಗೌರುವಿಸಿದರು, ಆದರೆ ಪ್ರಧಾನಿ ಮೋದಿಯವರ ಕೈ ಬಲಪಡಿಸುವುದಕ್ಕೋಸ್ಕರ ವಾಪಸ್ಸು ಬಂದಿದ್ದೇನೆ ಅಂತ ಶೆಟ್ಟರ್ ಹೇಳಿದ್ದನ್ನು ಖರ್ಗೆ ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ನೆಚ್ಚಿಕೊಂಡರೆ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ ಅನ್ನೋದನ್ನು ಮನಗಂಡಿರುವ ಬಿಜೆಪಿ ವರಿಷ್ಠರು ಶೆಟ್ಟರ್ ಅವರನ್ನು ವಾಪಸ್ಸು ಬರಮಾಡಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು. ಹೋಗಲಿಚ್ಛಿಸುವವರು ಹೋಗುತ್ತಾರೆ ಅದರಿಂದ ಕಾಂಗ್ರೆಸ್ ಪಕ್ಷಕ್ಕೇನೂ ಹಾನಿಯಿಲ್ಲ, ಅಂತ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on