AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದ ಸ್ಯಾಮ್ ಪಿತ್ರೋಡಾ

ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯನ್ನು ಮುಖ್ಯವಾಗಿ ಅದರ ನೆರೆಹೊರೆಯ ಮೇಲೆ ಕೇಂದ್ರೀಕರಿಸಬೇಕೆಂದು ಅವರು ಒತ್ತಾಯಿಸಿದರು. ಪಾಕಿಸ್ತಾನಕ್ಕೆ ಭೇಟಿ ನೀಡುವುದರಿಂದ ತಮಗೆ ಮನೆಯಲ್ಲಿರುವಂತೆ ಭಾಸವಾಗುತ್ತದೆ ಎಂದು ಅವರು ಹೇಳಿದರು. ಪಿತ್ರೋಡಾ ಅವರ ಹೇಳಿಕೆಯಿಂದ ಬಿಜೆಪಿ ಈಗ ಮೇಲೆ ಟೀಕಾ ಪ್ರಹಾರ ನಡೆಸುತ್ತಿದೆ.

ನಯನಾ ರಾಜೀವ್
|

Updated on:Sep 19, 2025 | 2:15 PM

Share

ನವದೆಹಲಿ, ಸೆಪ್ಟೆಂಬರ್ 19: ‘‘ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ’’ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.  ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯನ್ನು ಮುಖ್ಯವಾಗಿ ಅದರ ನೆರೆಹೊರೆಯ ದೇಶಗಳ ಮೇಲೆ ಕೇಂದ್ರೀಕರಿಸಬೇಕೆಂದು ಅವರು ಒತ್ತಾಯಿಸಿದರು. ಪಾಕಿಸ್ತಾನಕ್ಕೆ ಭೇಟಿ ನೀಡುವುದರಿಂದ ತಮಗೆ ಮನೆಯಲ್ಲಿರುವಂತೆ ಭಾಸವಾಗುತ್ತದೆ ಎಂದು  ಹೇಳಿದ್ದರು. ಪಿತ್ರೋಡಾ ಅವರ ಹೇಳಿಕೆಯಿಂದಾಗಿ ಬಿಜೆಪಿ ಈಗ ಕಾಂಗ್ರೆಸ್​ ಮೇಲೆ  ಟೀಕಾ ಪ್ರಹಾರ ನಡೆಸುತ್ತಿದೆ.

ಸ್ಯಾಮ್ ಪಿತ್ರೋಡಾ ಪಾಕಿಸ್ತಾನ ತನ್ನ ‘ತವರು’ ಎಂದು ಭಾವಿಸುವುದಾಗಿ ಹೇಳಿದ್ದಾರೆ.  26/11 ಉಗ್ರ ದಾಳಿಯ  ನಂತರ ಯುಪಿಎ ಪಾಕಿಸ್ತಾನದ ವಿರುದ್ಧ ಯಾವುದೇ ಬಲವಾದ ಕ್ರಮ ಕೈಗೊಳ್ಳದಿರುವುದರಲ್ಲಿ ಅಚ್ಚರಿ ಏನಿಲ್ಲ ಎಂದು ಬಿಜೆಪಿ ಹೇಳಿದೆ.

ನಾನು ಬಾಂಗ್ಲಾದೇಶಕ್ಕೆ ಹೋಗಿದ್ದೇನೆ, ನಾನು ನೇಪಾಳಕ್ಕೆ ಹೋಗಿದ್ದೇನೆ ಎಲ್ಲಾ ಕಡೆಯೂ ನನಗೆ ಬೇರೆ ದೇಶದಲ್ಲಿರುವಂತೆ ಭಾಸವಾಗಿಲ್ಲ ಎಂದು ಹೇಳಿದರು. ಈ ಹಿಂದೆ ಚೀನಾ ದೇಶ ನಮ್ಮ ಶತ್ರುವಲ್ಲ ಎಂಬ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಭಾರತ-ಚೀನಾ ವಿವಾದವು ಯಾವಾಗಲೂ ಹೆಚ್ಚಾಗಿ ಅತಿರೇಕಕ್ಕೆ ಹೋಗುತ್ತದೆ. ಆದರೆ, ಅದರ ಅವಶ್ಯಕತೆಯಿಲ್ಲ ಎಂದು ಹೇಳಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:12 pm, Fri, 19 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ