ಕಾಂಗ್ರೆಸ್ ಎಸ್ಐಆರ್ ಪ್ರತಿಭಟನೆಗೆ ಬಿಜೆಪಿ ಕೌಂಟರ್: ಕೋಲಾರದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ’ ಮಹಾ ಪಾದಯಾತ್ರೆ
ಕಾಂಗ್ರೆಸ್‌ನ ಎಸ್ಐಆರ್ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ, ಬಿಜೆಪಿ ‘‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’’ ಅಭಿಯಾನದ ಭಾಗವಾಗಿ ಕೋಲಾರದಲ್ಲಿ ಬೃಹತ್ ಪಾದಯಾತ್ರೆ ನಡೆಸಿತು. ಹರೀಶ್ ದ್ವಿವೇದಿ, ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದರು. ಕಾಂಗ್ರೆಸ್ ಪ್ರಚಾರ ಮತ್ತು ಅರಾಜಕತೆಯನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕೋಲಾರ, ನವೆಂಬರ್ 3: ಕಾಂಗ್ರೆಸ್ ಪಕ್ಷದ ಎಸ್ಐಆರ್ ಪ್ರತಿಭಟನೆಗೆ ಪ್ರತ್ಯುತ್ತರ ನೀಡಲು ಬಿಜೆಪಿ ‘‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’’ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಿದೆ. ಇದರ ಭಾಗವಾಗಿ, ಇಂದು ಕೋಲಾರದಲ್ಲಿ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಡೂಮ್‌ಲೈಟ್ ವೃತ್ತದಿಂದ ಗಾಂಧಿ ಭವನದವರೆಗೆ ಸಾಗಿದ ಈ ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಗರಿಕರು ಭಾಗವಹಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಉಪಸ್ಥಿತರಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್‌ನ ಅಪಪ್ರಚಾರ ಮತ್ತು ಅರಾಜಕತೆ ಸೃಷ್ಟಿಸುವ ಪ್ರಯತ್ನಗಳನ್ನು ಖಂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತು. ಈ ಪಾದಯಾತ್ರೆಯು ಜನರಲ್ಲಿ ಜಾಗೃತಿ ಮೂಡಿಸುವ ಗುರಿ ಹೊಂದಿದೆ. ವಕೀಲರು, ವೈದ್ಯರು, ಸಾಫ್ಟ್‌ವೇರ್ ಇಂಜಿನಿಯರ್‌ಗಳು, ವ್ಯಾಪಾರಿಗಳು ಮತ್ತು ಕೂಲಿ ಕಾರ್ಮಿಕರು ಸೇರಿದಂತೆ ಸಮಾಜದ ವಿವಿಧ ಸ್ತರದ ಜನರು ಈ ಪಾದಯಾತ್ರೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
