Hubballi; ಬಿಜೆಪಿ ನನ್ನನ್ನು ಗೌರವದಿಂದ ನಡೆಸಿಕೊಳ್ಳಲಿಲ್ಲ ಆದರೆ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡಿ ಗೌರವಿಸುತ್ತಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಶೆಟ್ಟರ್ ಹೇಳಿದರು
ಹುಬ್ಬಳ್ಳಿ: ಬಿಜೆಪಿ ತನ್ನನ್ನು ಗೌರವದಿಂದ (honour ) ನಡೆಸಿಕೊಳ್ಳಲಿಲ್ಲ, ಸ್ವಾಭಿಮಾನಕ್ಕೆ ಪೆಟ್ಟಾಗಿದ್ದರಿಂದ ಅದನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದೆ, ಈ ಪಕ್ಷಕ್ಕೆ ಸೇರುವಾಗಲೂ ಗೌರವದಿಂದ ನಡೆಸಿಕೊಳ್ಳುವ ಷರತ್ತು ಕಾಂಗ್ರೆಸ್ ನಾಯಕರ (Congress Leaders ) ಮುಂದಿಟ್ಟಿದ್ದೆ, ಅವರು ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾ ಸೂಕ್ತವಾದ ಸ್ಥಾನಮಾನ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಧುರೀಣ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು. ಹುಬ್ಬಳ್ಳಿಯಲ್ಲಿಂದು ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ; ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿ ಪೆಟ್ಟು ತಿಂದರೂ ಪಾಠ ಮಾತ್ರ ಕಲಿತಿಲ್ಲ ಎಂದರು. ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ, ಗ್ಯಾರಂಟಿ ಮತ್ತು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿರುವುದರಿಂದ ಮುಂದಿನ ವರ್ಷ ನಡೆಯಲಿರುವ ಲೋಕ ಸಭಾ ಚುನಾವಣೆಯಲ್ಲೂ ವಿಧಾನ ಸಭಾ ಚುನಾವಣೆಯ ಪುನರಾರ್ವತನೆಯಾದರೆ ಆಶ್ಚರ್ಯವಿಲ್ಲ ಎಂದು ಶೆಟ್ಟರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ