Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Foundation Day: ದಶಕಗಳಿಂದ ಬಿಜೆಪಿ ಬೆಂಗಳೂರಿನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದೆ: ನಿರ್ಮಲಾ ಸೀತಾರಾಮನ್

BJP Foundation Day: ದಶಕಗಳಿಂದ ಬಿಜೆಪಿ ಬೆಂಗಳೂರಿನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದೆ: ನಿರ್ಮಲಾ ಸೀತಾರಾಮನ್

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 06, 2023 | 3:11 PM

ಪಕ್ಷದ ಧೀಮಂತ ನಾಯಕರಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬಂಧಿಸಿ ಇದೇ ಬೆಂಗಳೂರಲ್ಲಿ ಇಡಲಾಗಿತ್ತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ನಗರದಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದರು. ಈ ಸಮಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಬಗ್ಗೆ ಹೇಳಿದ ಅವರು ಎರಡೂ ಕಡೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಅದೇನು ದೊಡ್ಡ ವಿಷಯವಲ್ಲ ಎಂದು ಜನ ಎಣಿಬಹುದು ಆದರೆ ಅಸಲು ಸಂಗತಿಯೇನೆಂದರೆ, ಬಿಜೆಪಿಗೆ ಬೆಂಗಳೂರು ಜೊತೆ ದಶಕಗಳಿಂದ ಭಾವನಾತ್ಮಕ ಸಂಬಂಧವಿದೆ ಎಂದರು. 1975 ರಲ್ಲಿ ಭಾರತದ ಪ್ರಜಾಪ್ರಭುತ್ವದ ಮೇಲೆ ತುರ್ತು ಪರಿಸ್ಥಿತಿ (Emergency) ಮೂಲಕ ಭಯಾನಕ ದಾಳಿ ನಡೆದಾಗ ತಮ್ಮ ಪಕ್ಷದ ಧೀಮಂತ ನಾಯಕರಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಮತ್ತು ಲಾಲ್ ಕೃಷ್ಣ ಅಡ್ವಾಣಿ (Lal Krishna Advani) ಅವರನ್ನು ಬಂಧಿಸಿ ಇದೇ ಬೆಂಗಳೂರಲ್ಲಿ ಇಡಲಾಗಿತ್ತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ