BJP Janakrosh Yatra: ಚುನಾವಣೆ ಹತ್ತಿರದಲ್ಲಿಲ್ಲ, ಹೋರಾಟದ ಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ ವಾಗ್ದಾಳಿ
ಬಿಜೆಪಿ ಜನಾಕ್ರೋಶ ಯಾತ್ರೆ: ಬೆಲೆ ಏರಿಕೆ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಗುರುವಾರ ಉಡುಪಿಯಲ್ಲಿ ನಡೆಯಿತು. ಯಾತ್ರೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ.
ಉಡುಪಿ, ಏಪ್ರಿಲ್ 10: ಕರ್ನಾಟಕ ಕಾಂಗ್ರೆಸ್ ಸರ್ಕಾರ ಜನಹಿತ ಕಾಯುವ ಸರ್ಕಾರವಲ್ಲ, ಜಾಹೀರಾತಿನ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈಗ ಚುನಾವಣೆ ಹತ್ತಿರದಲ್ಲಿಲ್ಲ, ರಾಜಕೀಯ ಗಿಮಿಕ್ಗೋಸ್ಕರ ಈ ಯಾತ್ರೆ ಮಾಡ್ತಿಲ್ಲ ಎಂದ ವಿಜಯೇಂದ್ರ, ಕಾಂಗ್ರೆಸ್ನವರು ಚುನಾವಣೆಗೂ ಮುನ್ನ ಮೇಕೆದಾಟುವಿಗಾಗಿ ಪಾದಯಾತ್ರೆ ಮಾಡಿದ್ದರು. ಅಧಿಕಾರಕ್ಕೆ ಬಂದ ನಂತರ ಎಲ್ಲವನ್ನೂ ಮರೆತರು ಎಂದು ಕಿಡಿಕಾರಿದರು. ವಿಜಯೇಂದ್ರ ಮಾತಿನ ಪೂರ್ಣ ವಿಡಿಯೋ ಇಲ್ಲಿದೆ.
Published on: Apr 10, 2025 02:09 PM