ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Sep 25, 2023 | 4:15 PM

ಒಂದು ವೇಳೆ ಮುಸಲ್ಮಾನರಿಗೆ ಕುಮಾರಸ್ವಾಮಿಯ ಮೇಲೆ ಪ್ರೀತಿ ಇದ್ದಿದ್ದರೆ, ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ ಎಂದು ಯತ್ನಾಳ್ ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ ಅವರು ವಿಜಯದಶಮಿಯ ಬಳಿಕ ಒಂದು ಶುಭ ಘಳಿಗೆಯಲ್ಲಿ ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ಹೇಳಿದರು.

ವಿಜಯಪುರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಸಲ್ಮಾನರ ವೋಟು (Muslim votes) ಅಗತ್ಯವಿಲ್ಲ ಎಂದು ಹೇಳಿದರು. ಅವರು ಯಾವತ್ತೂ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಕೈಹಿಡಿದವರಲ್ಲ, ಅವರು ವೋಟು ಹಾಕಿದ್ದರೆ ಅದು ಹೆಚ್ ಡಿ ದೇವೇಗೌಡರಿಗೆ (HD Devegowda) ಮಾತ್ರ ಎಂದು ಯತ್ನಾಳ್ ಹೇಳಿದರು. ಒಂದು ವೇಳೆ ಮುಸಲ್ಮಾನರಿಗೆ ಕುಮಾರಸ್ವಾಮಿಯ ಮೇಲೆ ಪ್ರೀತಿ ಇದ್ದಿದ್ದರೆ, ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ ಎಂದು ಯತ್ನಾಳ್ ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ ಅವರು ವಿಜಯದಶಮಿಯ ಬಳಿಕ ಒಂದು ಶುಭ ಘಳಿಗೆಯಲ್ಲಿ ಲೋಕಸಭಾ ಚುನಾವಣೆಗಾಗಿ ಎರಡು ಪಕ್ಷಗಳ ನಾಯಕರ ನಡುವೆ ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.