ಬಿಜೆಪಿ-ಜೆಡಿಎಸ್ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸಚಿವ ಸತೀಶ್ ಜಾರಕಿಹೊಳಿ
ಪರಿಷತ್ ಚುನಾವಣಾ ಫಲಿತಾಂಶದ ಕುರಿತು ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್‌ಗೆ ಇದು ಹಿನ್ನಡೆಯಲ್ಲ. ನಾವು ಸೋತಿದ್ದು ನಮ್ಮ ಸೀಟುಗಳನ್ನಲ್ಲ, ಅವು ಅವರಿದ್ದ ಸೀಟುಗಳು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಅವರಿಗೆ ಹೆಚ್ಚು ಶಕ್ತಿ ಬಂದಿದ್ದು, ಅದೇ ಗೆಲುವಿಗೆ ಕಾರಣ ಎಂದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಅಥವಾ ನಾಯಕತ್ವ ವೈಫಲ್ಯ ಇದಕ್ಕೆ ಕಾರಣವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 29: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಸೋತದ್ದು ನಮ್ಮ ಸೀಟುಗಳನ್ನಲ್ಲ, ನಾಲ್ಕರಲ್ಲಿ ಒಂದು ಮಾತ್ರ ನಮ್ಮದಿತ್ತು. ಉಳಿದ ಮೂರು ಸೀಟುಗಳು ಅವರದ್ದೇ ಆಗಿದ್ದವು. ಈಗ ಅವರೇ ಅದನ್ನು ಮರಳಿ ಗೆದ್ದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಸ್ಪರ್ಧಿಸುವುದರಿಂದ ಅವರಿಗೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆ ಅಥವಾ ನಾಯಕತ್ವದ ವೈಫಲ್ಯ ಇದಕ್ಕೆ ಕಾರಣವಲ್ಲ. ಹಿಂದೆ ಸಿದ್ದರಾಮಯ್ಯ, ಎಸ್.ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದಾಗಲೂ ನಾವು ಈ ಕ್ಷೇತ್ರಗಳಲ್ಲಿ ಸೋತಿದ್ದೆವು. ಈ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ಮಾನದಂಡವಲ್ಲ ಎಂದೂ ಅವರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

