ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸಚಿವ ಸತೀಶ್​​ ಜಾರಕಿಹೊಳಿ

Edited By:

Updated on: Oct 28, 2026 | 12:37 PM

ಪರಿಷತ್ ಚುನಾವಣಾ ಫಲಿತಾಂಶದ ಕುರಿತು ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್‌ಗೆ ಇದು ಹಿನ್ನಡೆಯಲ್ಲ. ನಾವು ಸೋತಿದ್ದು ನಮ್ಮ ಸೀಟುಗಳನ್ನಲ್ಲ, ಅವು ಅವರಿದ್ದ ಸೀಟುಗಳು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಅವರಿಗೆ ಹೆಚ್ಚು ಶಕ್ತಿ ಬಂದಿದ್ದು, ಅದೇ ಗೆಲುವಿಗೆ ಕಾರಣ ಎಂದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಅಥವಾ ನಾಯಕತ್ವ ವೈಫಲ್ಯ ಇದಕ್ಕೆ ಕಾರಣವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 29: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಸೋತದ್ದು ನಮ್ಮ ಸೀಟುಗಳನ್ನಲ್ಲ, ನಾಲ್ಕರಲ್ಲಿ ಒಂದು ಮಾತ್ರ ನಮ್ಮದಿತ್ತು. ಉಳಿದ ಮೂರು ಸೀಟುಗಳು ಅವರದ್ದೇ ಆಗಿದ್ದವು. ಈಗ ಅವರೇ ಅದನ್ನು ಮರಳಿ ಗೆದ್ದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಸ್ಪರ್ಧಿಸುವುದರಿಂದ ಅವರಿಗೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆ ಅಥವಾ ನಾಯಕತ್ವದ ವೈಫಲ್ಯ ಇದಕ್ಕೆ ಕಾರಣವಲ್ಲ. ಹಿಂದೆ ಸಿದ್ದರಾಮಯ್ಯ, ಎಸ್.ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದಾಗಲೂ ನಾವು ಈ ಕ್ಷೇತ್ರಗಳಲ್ಲಿ ಸೋತಿದ್ದೆವು. ಈ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ಮಾನದಂಡವಲ್ಲ ಎಂದೂ ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More