ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ: ಡಾ ಸಿಎನ್ ಅಶ್ವಥ್ ನಾರಾಯಣ, ಶಾಸಕ
ಇದೆಲ್ಲ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಲಿದ್ದು ಬಿಜೆಪಿ-ಜೆಡಿಎಸ್ ಮೈತ್ರಿಯು ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ, ಯಾಕೆಂದರೆ ಜನ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರೀತಿಸುತ್ತಾರೆ, ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವುದೇ ಪ್ರತಿಯೊಬ್ಬ ಕನ್ನಡಿಗನ ಆಶಯವಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಕಾಂಗ್ರೆಸ್ ಸರ್ಕಾರದ ಆಡಳಿತ (governance) ಮತ್ತು ಆಪರೇಶನ್ ಹಸ್ತದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರಿಗೆ ತಮ್ಮ ಶಾಸಕರನ್ನೇ ಹಿಡಿತದಲ್ಲಿಟ್ಟುಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಕಾರ್ಯಗಳು (development works) ನಡೆಯುತ್ತಿಲ್ಲ, ಆಡಳಿತ ವ್ಯವಸ್ಥೆ ಕುಸಿದಿದೆ, ತಮ್ಮ ಕಷ್ಟ ಸುಖಗಳನ್ನು ಕೇಳೋರಿಲ್ಲ, ರೈತ ಮತ್ತು ಜನ ವಿರೋಧಿ ಸರ್ಕಾರವೆಂದು ಜನ ಮಾತಾಡಿಕೊಳ್ಳುತ್ತಿದ್ದಾರೆ ಅಂತ ಅವರ ಶಾಸಕರೇ ಹೇಳುತ್ತಿದ್ದಾರೆ ಎಂದು ಅಶ್ವಥ್ ನಾರಾಯಣ ಹೇಳಿದರು. ಇವರು ನಡೆಸುತ್ತಿರುವ ಆಪರೇಶನ್ ಹಸ್ತ ಎಷ್ಟರಮಟ್ಟಿಗೆ ಯಶ ಸಾಧಿಸುತ್ತದೋ ಗೊತ್ತಿಲ್ಲ ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಜನ ಬೆಂಬಲಿಸಿ ಆಶೀರ್ವದಿಸಿದ್ದಾರೆ. ಇದೆಲ್ಲ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಲಿದ್ದು ಬಿಜೆಪಿ-ಜೆಡಿಎಸ್ ಮೈತ್ರಿಯು ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ, ಯಾಕೆಂದರೆ ಜನ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರೀತಿಸುತ್ತಾರೆ, ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವುದೇ ಪ್ರತಿಯೊಬ್ಬ ಕನ್ನಡಿಗನ ಆಶಯವಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ