ಮಾರ್ಚ್ 3ರಿಂದ ಬಜೆಟ್ ಅಧಿವೇಶನ: ಬೆಂಗಳೂರು ಹೋಟೆಲೊಂದರಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ
ಮಾರ್ಚ್ 3 ರಿಂದ ವಿಧಾನ ಮಂಡಲದ ಬಜೆಟ್ ಅಧಿವೇಶನ ಶುರವಾಗಲಿರುವುದರಿಂದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಯುತ್ತಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೇಗೆ ಹೋರಾಟ ನಡೆಸುವುದು, ಹೇಗೆ ಇಕ್ಕಟ್ಟಿನಲ್ಲಿ ಸಿಕ್ಕಿಸಬಹುದು ಎಂಬ ಅಂಶಗಳ ಮೇಲೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡವೆ ಉತ್ತಮ ಬಾಂಧವ್ಯವಿದೆ. ಇಬ್ಬರೂ ಯುವಕರು ಮತ್ತು ಯೋಚನೆ ಮಾಡುವ ರೀತಿಯಲ್ಲಿ ಪ್ರಾಯಶಃ ಸಮಾನತೆ ಇರಬಹುದು. ಹಾಗೆ ನೋಡಿದರೆ ಸೂರ್ಯ ವಯಸ್ಸಿನಲ್ಲಿ ತಮ್ಮ ಅಧ್ಯಕ್ಷನಿಗಿಂತ ಬಹಳ ಚಿಕ್ಕವರು. ಇವತ್ತು ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರ ನೇತೃತ್ವದಲ್ಲಿ ಸಭೆ ಆಯೋಜಿಸಲ್ಪಟ್ಟಿದೆ. ಸಭೆಯಲ್ಲಿ ಪಾಲ್ಗೊಳ್ಳಲು ವಿಜಯೇಂದ್ರ ಆಗಮಿಸಿದಾಗ ತೇಜಸ್ವೀ ಸೂರ್ಯ ಕಾರಿನವರೆಗೆ ಹೋಗಿ ಅಧ್ಯಕ್ಷನನ್ನು ಬರಮಾಡಿಕೊಳ್ಳುತ್ತಾರೆ ಮತ್ತು ಕೈ ಹಿಡಿದು ಹೋಟೆಲ್ನೊಳಗೆ ಕರೆದೊಯ್ಯತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಹಗರಣ: ವಾಷಿಂಗ್ ನಿರ್ಮಾ ಪೌಡರ್ ಹಾಕಿ ತೊಳೆದಿದ್ದಾರೆ: ಲೋಕಾಯುಕ್ತ ಕ್ಲೀನ್ಚಿಟ್ಗೆ ಅಶೋಕ್ ವ್ಯಂಗ್ಯ