ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಟೀ ಶರ್ಟ್ ಧರಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ವಾಲ್ಮೀಕಿ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಭಟನೆ ತೀವ್ರಗೊಳಿಸಿವೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಕಪ್ಪು ಟೀ-ಶರ್ಟ್ ಧರಿಸಿ ಶಾಸಕರು ವಿಧಾನಸೌಧದತ್ತ ತೆರಳಿದ್ದಾರೆ. ಕಾಂಗ್ರೆಸ್ ಸರಕಾರ ಭ್ರಷ್ಟ ಮಂತ್ರಿಯನ್ನು ರಕ್ಷಿಸುತ್ತಿದೆ ಮತ್ತು ದಲಿತರ ಹಣದ ದುರ್ಬಳಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ಬೆಂಗಳೂರು, ಆಗಸ್ಟ್ 21: ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನತಾ ದಳ (ಜಾತ್ಯತೀತ) ಪಕ್ಷಗಳ ಶಾಸಕರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ, ಶಾಸಕರು ಕಪ್ಪು ಟೀ-ಶರ್ಟ್ ಧರಿಸಿ ಶಾಸಕರ ಭವನದ ಬಳಿ ಇರುವ ವಾಲ್ಮೀಕಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗಿದೆ. ಶಾಸಕರು ಧರಿಸಿದ್ದ ಟೀ ಶರ್ಟ್ಗಳ ಮೇಲೆ ನಾಗೇಂದ್ರ ರಾಜೀನಾಮೆ ನೀಡಲಿ ಎಂಬ ಬರಹ ಇರುವುದು ಕಂಡುಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು

