BJP JDS Padayatra Live: ಮೈತ್ರಿ ನಾಯಕರ ಮೂರನೇ ದಿನದ ಪಾದಯಾತ್ರೆ, ಲೈವ್​ ವೀಕ್ಷಿಸಿ

BJP JDS Padayatra Live: ಮೈತ್ರಿ ನಾಯಕರ ಮೂರನೇ ದಿನದ ಪಾದಯಾತ್ರೆ, ಲೈವ್​ ವೀಕ್ಷಿಸಿ

ವಿವೇಕ ಬಿರಾದಾರ
|

Updated on:Aug 05, 2024 | 11:13 AM

MUDA Scam, Bangalore Mysore Padayatra Live: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ-ಜೆಡಿಎಸ್​ ನಾಯಕರ ಮೈಸೂರು ಚಲೋ ಪಾದಯಾತ್ರೆ ಮೂರನೆ ದಿನಕ್ಕೆ ಕಾಲಿಟ್ಟಿದೆ. ಲೈವ್​ ಇಲ್ಲಿ ವೀಕ್ಷಸಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ಆರಂಭಿಸಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರವಿವಾರ ಬಿಡದಿಯಿಂದ ಆರಂಭವಾಗಿದ್ದ ಪಾದಯಾತ್ರೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಂಗಲ್ ಗ್ರಾಮದಲ್ಲಿ ಅಂತ್ಯಗೊಂಡಿತ್ತು. ಇಂದು (ಆ.05) ಬೆಳಗ್ಗೆ ಬೆಳಗ್ಗೆ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಕೆಂಗಲ್ ಹನುಮಂತಯ್ಯ ಸಮಾಧಿಗೆ ಭೇಟಿ ನೀಡಿದರು. ಬಳಿಕ ಇಲ್ಲಿದ ಮೂರನೇ ದಿನದ ಪಾದಯಾತ್ರೆ ಆರಂಭಿಸಿದ್ದಾರೆ. ಪಾದಯಾತ್ರೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟದವರೆಗೆ ಸಾಗಲಿದೆ.

ಪಾದಯಾತ್ರೆಯಲ್ಲಿ ವಿಪಕ್ಷ ನಾಯಕ ಆರ್​ ಅಶೋಕ್​, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಅಶ್ವತ್​ ನಾರಾಯಣ, ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್​ ಭಾಗವಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Aug 05, 2024 11:10 AM