BJP JDS Padayatra Live: ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
ಮುಡಾ ಸೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಮತ್ತು ಜೆಡಿಎಸ್ ಪಾದಯಾತ್ರೆ ಇಂದಿನಿಂದ ಆರಂಭವಾಗ್ತಿದೆ. ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಲೈವ್ ಇಲ್ಲಿ ವೀಕ್ಷಿಸಿ.
ಬೆಂಗಳೂರು, ಆಗಸ್ಟ್.03: ಮುಡಾ ಅಕ್ರಮದ ವಿರುದ್ಧ ಬಿಜೆಪಿ-ಜೆಡಿಎಸ್ ರಣಕಹಳೆ ಮೊಳಗಿಸಲು ಸಿದ್ಧವಾಗಿದೆ. ಮುಡಾದಿಂದ, ಅಂದ್ರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶಗಳನ್ನು ಹಂಚಲಾಗಿದೆ ಎಂಬ ಆರೋಪ ಬಿಜೆಪಿ, ಜೆಡಿಎಸ್‌ಗೆ ಬ್ರಹ್ಮಾಸ್ತ್ರವಾಗಿದೆ. ಈ ಹಗರಣದ ಆರೋಪದ ಮುಂದಿಟ್ಟು ಇಂದಿನಿಂದ ದೋಸ್ತಿ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಕೆಂಗೇರಿಯ ನೈಸ್ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ ಚಾಲನೆ ನೀಡಿದರು. ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ನಡೀತಿದ್ದು, ಪಾದಯಾತ್ರೆ ಆರಂಭಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ರು. ಬಿಜೆಪಿ-ಜೆಡಿಎಸ್ ಪಕ್ಷದ ಪಾದಯಾತ್ರೆ ಲೈವ್ ಇಲ್ಲಿ ವೀಕ್ಷಿಸಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:44 am, Sat, 3 August 24