ಸಿಎಂ ಸಿದ್ದರಾಮಯ್ಯಗೆ ಬಂಡೆಯೇ ಸಮಸ್ಯೆ: ಡಿಕೆ ಶಿವಕುಮಾರ್​ಗೆ ನಿಖಿಲ್ ಟಾಂಗ್

ಬಿಜೆಪಿ ಜೆಡಿಎಸ್ ಪಾದಯಾತ್ರೆ ಅಂತಿಮ ಹಂತ ತಲುಪಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೈತ್ರಿ ಪಕ್ಷಗಳ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಬಂಡೆಯೇ ಸಮಸ್ಯೆ: ಡಿಕೆ ಶಿವಕುಮಾರ್​ಗೆ ನಿಖಿಲ್ ಟಾಂಗ್
| Updated By: ಗಣಪತಿ ಶರ್ಮ

Updated on: Aug 10, 2024 | 1:16 PM

ಮೈಸೂರು, ಆಗಸ್ಟ್ 10: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್​ಗೆ ಟಾಂಗ್ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಆಯೋಜಿಸಿರುವ ಪಾದಯಾತ್ರೆಯ ಕೊನೆಯ ದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದರು.

ಸಿದ್ದರಾಮಯ್ಯನ ಹಿಂದೆ ಬಂಡೆ ಇದೆ ಎಂದು ಡಿಸಿಎಂ ಡಿಕೆ ಹೇಳಿದ್ದಾರೆ. ಈ ಬಂಡೆಯೇ ಸಿದ್ದರಾಮಯ್ಯಗೆ ಪ್ರಾಬ್ಲಂ. ಮುಖವಾಡ ಹಾಕಿ ಒಳಗೊಂದು ಹೊರಗೊಂದು ಮಾತನಾಡುತ್ತಿದ್ದಾರೆ. ಈಗಾಗಲೇ ಬಂಡೆ ಸಿಎಂ ಕುರ್ಚಿಗೆ ಟವೆಲ್ ಹಾಕಿಕೊಂಡು ಕುಳಿತಿದೆ. ಬಂಡೆ ಯಾವಾಗ ಬೇಕಾದರೂ ಸಿದ್ದರಾಮಯ್ಯ ಮೇಲೆ ಬೀಳಬಹುದು ಎಂದು ನಿಖಿಲ್ ಹೇಳಿದರು.

ಇದನ್ನೂ ಓದಿ: ಯತ್ನಾಳ್ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಿಲ್ಲ: ಬಹಿರಂಗವಾಗಿಯೇ ಅಸಹಾಯಕತೆ ಹೊರಹಾಕಿದ ಅಶೋಕ್

ಸಿದ್ದರಾಮಯ್ಯ ಜನತಾ ಪರಿವಾರದಲ್ಲಿದ್ದಾಗ ಏನು ಮಾತನಾಡಿದ್ದರು ಎಂಬುದು ಗೊತ್ತಿದೆ. ಸೋನಿಯಾ ಗಾಂಧಿ ಬಗ್ಗೆ ಏನೇನು ಮಾತನಾಡಿದ್ದಾರೆ ಎಲ್ಲಾ ಗೊತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯದಿಂದ ಕೇಂದ್ರಕ್ಕೆ ಓಡಿಸಿದ್ದು ಯಾರು? ಜಿ ಪರಮೇಶ್ವರ್​ರನ್ನು ಸೋಲಿಸಿದ್ದು ಯಾರು? ಎಲ್ಲವೂ ಕೂಡ ಗೊತ್ತಿದೆ ಎಂದು ನಿಖಿಲ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು