BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಅಬ್ಬರದ ಭಾಷಣ
ಕೆಂಗೇರಿಯಲ್ಲಿ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಸಮಾವೇಶ ನಡೆದಿದ್ದು ಕೇಂದ್ರ ಸಚಿವ ಹೆಚ್ಡಿಕೆ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಶಾಸಕ ಜನಾರ್ದನ ರೆಡ್ಡಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಬಿಜೆಪಿ, ಜೆಡಿಎಸ್ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ.
ಬೆಂಗಳೂರು, ಆಗಸ್ಟ್.03: ಮುಡಾ ಸೈಟ್ ಹಗರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಇಂದಿನಿಂದ ಮೈಸೂರು ಚಲೋಗೆ (Mysore Chalo) ಆರಂಭಿಸಿದೆ. ಪಾದಯಾತ್ರೆಗೂ ಮುನ್ನವೇ ಬೆಂಗಳೂರಿನ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮೈತ್ರಿ ನಾಯಕರು, ಜೆ.ಕೆ.ಗ್ರ್ಯಾಂಡ್ ಅರೆನಾ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಸಿದ್ರು. ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ನಾಯಕರು ಚಾಲನೆ ನೀಡಿದ್ದಾರೆ. ಕಹಳೆ ಊದಿ, ನಗಾರಿ ಬಾರಿಸುವ ಮೂಲಕ ಪಾದಯಾತ್ರೆ ಆರಂಭವಾಗಿದೆ.
ಮೈಸೂರು ಚಲೋ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸೇರಿ ಬಿಜೆಪಿ, ಜೆಡಿಎಸ್ ಶಾಸಕರು, ಕಾರ್ಯಕರ್ತರು ಭಾಗಿಯಾಗಿದ್ರು. ಇದೇ ವೇಳೆ ವೇದಿಕೆ ಮೇಲೆ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ