ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ‘ದೋಸ್ತಿ’ ನಾಯಕರಿಂದ ಅಹೋರಾತ್ರಿ ಧರಣಿ

Edited By:

Updated on: Feb 04, 2026 | 6:48 AM

ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ಅಹೋರಾತ್ರಿ ಧರಣಿ ಕೈಬಿಡುವಂತೆ ಸ್ಪೀಕರ್ ಯು.ಟಿ.ಖಾದರ್ ಮನವಿ ಹೊರತಾಗಿಯೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಮೈತ್ರಿ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು, ಫೆಬ್ರವರಿ 04: ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟುಕೊಂಡು, ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ ವಿರುದ್ಧ ನಾಯಕರು ಕಿಡಿಕಾರಿದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More