ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ
ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಸಂಬಂಧ ಸಭೆ ನಡೆಸಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿಯನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರ ಫಲಿತಾಂಶದ ಪ್ರಭಾವದಿಂದ ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾವು ಪಡೆದಿದ್ದು, ಮೈತ್ರಿಯ ಲಾಭ ನಷ್ಟಗಳ ಬಗ್ಗೆ ಚರ್ಚೆ ನಡೆದಿದೆ.
ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ ಚುನಾವಣೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ, ಜೆಡಿಎಸ್ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೊಸ ಕಾವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರಿಂದ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸಲು ಪಕ್ಷ ಮುಂದಾಗಿದೆ. ಇದೀಗ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿಸೋಣ ಎಂದಿದ್ದಾರೆ.
Published on: Jan 17, 2026 08:23 AM
