AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?; ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?; ಇಲ್ಲಿದೆ ಮಾಹಿತಿ

ಕಿರಣ್​ ಹನಿಯಡ್ಕ
| Edited By: |

Updated on: Oct 22, 2026 | 6:49 PM

Share

ಎಸ್​ಐಆರ್​​ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕಾಕ್ರೋಚ್​​ ಜನತಾ ಪಾರ್ಟಿ ಮತ್ತು ಕಾಂಗ್ರೆಸ್ ಪಕ್ಷಗಳು ತಪ್ಪು ಮಾಹಿತಿ ಹಾಗೂ ಸುಳ್ಳು ನಿರೂಪಣೆಗಳನ್ನು ಹರಡುತ್ತಿವೆ ಎಂದು ಆರೋಪಿಸಿರುವ ಬಿಜೆಪಿ, ದೇಶಾದ್ಯಂತ ಜಾಗೃತಿ ಅಭಿಯಾನಕ್ಕೆ ಮುಂದಾಗಿದೆ. ಇದರ ಭಾಗವಾಗಿ ಕರ್ನಾಟಕದಲ್ಲಿ ನವೆಂಬರ್ 5ರವರೆಗೆ ಪಾದಯಾತ್ರೆ, ಯುವ ಸಂವಾದ, ವಿಚಾರಗೋಷ್ಠಿಗಳು ನಡೆಯಲಿದೆ. ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ನೇತೃತ್ವದಲ್ಲಿ 10,000 ಜನರನ್ನೊಳಗೊಂಡ ಪಾದಯಾತ್ರೆಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಬೆಂಗಳೂರು, ಅಕ್ಟೋಬರ್​​ 22: ಸಿಜೆಪಿ, ಕಾಂಗ್ರೆಸ್ ವಿರುದ್ಧ ದೇಶಾದ್ಯಂತ ಅಭಿಯಾನಕ್ಕೆ ಬಿಜೆಪಿ ಮುಂದಾಗಿದ್ದು, ಇದರ ಭಾಗವಾಗಿ ರಾಜ್ಯದಲ್ಲೂ ನಾಳೆಯಿಂದ ನ.5ರವರೆಗೆ ಪಾದಯಾತ್ರೆ, ಯುವ ಸಂವಾದ, ವಿಚಾರ ಗೋಷ್ಠಿಗಳು ಸೇರಿದಂತೆ ವಿವಿಧ ಸ್ವರೂಪದಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಜಿಲ್ಲಾ ಕೇಂದ್ರಗಳಲ್ಲಿ 10 ಸಾವಿರ ಜನರನ್ನು ಸೇರಿಸಿ ಪಾದಯಾತ್ರೆಗೆ ನಿರ್ಧರಿಸಲಾಗಿದ್ದು, ಬೆಂಗಳೂರು ಹೊರತುಪಡಿಸಿ ಉಳಿದೆಡೆ ನಡೆಯಲಿದೆ. ಅಭಿಯಾನ ಬಗ್ಗೆ ರಾಜ್ಯ ನಾಯಕರ ಜೊತೆ BJP ಉಸ್ತುವಾರಿ ಹರೀಶ್ ದ್ವಿವೇದಿ ಆನ್​ಲೈನ್ ಮೂಲಕ ಸಭೆ ನಡೆಸಿದ್ದು, ಹಲವು ಸೂಚನೆಗಳನ್ನು ನೀಡಿದ್ದಾರೆ. ಅ.30 ಮತ್ತು 31ರಂದು ಅಭಿಯಾನದಲ್ಲಿ BJP ಉಸ್ತುವಾರಿ ಹರೀಶ್ ದ್ವಿವೇದಿ ಮತ್ತು ಸಹ ಉಸ್ತುವಾರಿ ಡಾ.ಕಾಸಂ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More