ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅರೋಗ್ಯ ವಿಚಾರಿಸಿದ ಬಿಜೆಪಿ ನಾಯಕಿ ಶಶಿಕಲಾ ಜೊಲ್ಲೆ
ಸಚಿವೆಯನ್ನು ಭೇಟಿಯಾದ ನಂತರ ಮಾತಾಡಿದ ಶಶಿಕಲಾ ಜೊಲ್ಲೆ, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ತನ್ನೊಂದಿಗೆ ಮಾತು ಕೂಡ ಆಡಿದರು ಎಂದು ಹೇಳಿದರು. ಅವರ ಅರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯ ವೈದ್ಯರೊಂದಿಗೂ ಮಾತಾಡಿರುವ ಮಾಜಿ ಸಚಿವೆ ಬೆನ್ನಿಗೆ ಪೆಟ್ಟಾಗಿರುವುದರಿಂದ ಊದಿಕೊಂಡಿದೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿದರು.
ಬೆಳಗಾವಿ: ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ರಸ್ತೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿದು ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕಂಡು ಮಾತಾಡಿಸಲು ಬಿಜೆಪಿಯ ಮುಖಂಡರು ಕೂಡ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಮಾಜಿ ಸಚಿವೆ ಮತ್ತು ಬೆಳಗಾವಿ ಭಾಗದಲ್ಲಿ ಪ್ರಭಾವಿ ಬಿಜೆಪಿ ನಾಯಕಿ ಎನಿಸಿಕೊಂಡಿರುವ ಶಶಿಕಲಾ ಜೊಲ್ಲೆ ಅವರು ತಮ್ಮ ಪತಿ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆಯ ಕ್ಷೇಮ ವಿಚಾರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದು ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆಗೆ ಧಾವಿಸಿದ ಪತಿ ರವೀಂದ್ರ ಹೆಬ್ಬಾಳ್ಕರ್
Latest Videos