ರಾಜ್ಯ ಕಾಂಗ್ರೆಸ್​​ ಸರ್ಕಾರದ ಪತನ – ಈ ಬಾರಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ರಿಂದ ಭವಿಷ್ಯ, ಗಡುವು ಯಾವಾಗ?

Updated on: Oct 02, 2023 | 8:41 PM

ರಾಮನಗರದಿಂದಲೇ ಸರ್ಕಾರ ಪತನದ ಬಗ್ಗೆ ಬ್ಯಾಕ್ ಟು ಬ್ಯಾಕ್ ಬಾಂಬ್ ಸಿಡಿದಿದೆ. ಕುಮಾರಸ್ವಾಮಿ ಬಳಿಕ ಸಿಪಿ ಯೋಗೇಶ್ವರ್, ಸರ್ಕಾರದ ಮುಳುಗುವ ಬಾಂಬ್ ಹಾಕಿರೋದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೀಡುಮಾಡಿದೆ.

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಸರ್ಕಾರದ ಪತನದ ಬಾಂಬ್ ಸಿಡಿಸಿರುವುದರ ಬನ್ನಿಗೇ ಬಿಜೆಪಿ ನಾಯಕ ಯೋಗೇಶ್ವರ್ ಅವರೂ ಸಹ ಅಂತಹುದೇ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಮುಳುಗುತ್ತೆ, ಪತನವಾಗುತ್ತೆ.. ನನ್ನನ್ನು 14 ತಿಂಗಳಿನಲ್ಲಿ ಕೆಳಗಿಳಿಸಿದಂತೆ ಈಗ ಈ ಸರ್ಕಾರವೂ ಉರುಳುತ್ತೆ ಅಂತ ಟಿವಿ ನೈನ್ ವಿಶೇಷ ಸಂದರ್ಶನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು. ಇದೀಗ ಸಂಕ್ರಾಂತಿ ವೇಳೆಗೆ ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಧಾಟಿಯಲ್ಲೇ ಬಿಜೆಪಿ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಸಹ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಹೊಗೆಯಾಡುತ್ತಿದೆ. ಇದು ಸರ್ಕಾರದ ಪತನಕ್ಕೆ ದಾರಿ ಮಾಡಿಕೊಡುತ್ತೆ ಅನ್ನೋ ಅರ್ಥದಲ್ಲೇ ಯೋಗೇಶ್ವರ್ ಬಾಂಬ್ ಸಿಡಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸರ್ಕಾರ ಪತನದ ಭವಿಷ್ಯ ನುಡಿದಿದ್ದರು.

ರಾಮನಗರದಿಂದಲೇ ಸರ್ಕಾರ ಪತನದ ಬಗ್ಗೆ ಬ್ಯಾಕ್ ಟು ಬ್ಯಾಕ್ ಬಾಂಬ್ ಸಿಡಿದಿದೆ. ಕುಮಾರಸ್ವಾಮಿ ಬಳಿಕ ಸಿಪಿ ಯೋಗೇಶ್ವರ್, ಸರ್ಕಾರದ ಮುಳುಗುವ ಬಾಂಬ್ ಹಾಕಿರೋದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೀಡುಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Oct 02, 2023 08:39 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More