AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ

ಶಿವಕುಮಾರ್ ಪತ್ತಾರ್
| Edited By: |

Updated on: Sep 09, 2024 | 2:51 PM

Share

ದೀಪಾವಳಿ ಹಬ್ಬದೊಳಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಎಂಎಲ್​ಸಿ ಸಿಟಿ ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರಕ್ಕೆ ಟೈಮ್ ಬಾಂಬ್​ ಫಿಕ್ಸ್ ಆಗಿದೆ. ಸಂಕ್ರಾಂತಿ ತುಂಬಾ ದೂರ ಆಯ್ತು, ದೀಪಾವಳಿ ಒಳಗೆ ಸರ್ಕಾರ ಢಮಾರ್ ಎಂದರು.

ಹುಬ್ಬಳ್ಳಿ, ಸೆಪ್ಟೆಂಬರ್ 9: ಹೊಸ ಸಿಎಂ, ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯ ಮಾಡಲಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್​​​ ಮುಹೂರ್ತ ನಿಗದಿ ಮಾಡಿದೆ. ಹೊರಗೆ ಸಿದ್ದರಾಮಯ್ಯ ಹಿಂದೆ ಬಂಡೆಯಂತೆ ಇರುತ್ತೇವೆ ಎನ್ನುತ್ತಾರೆ. ಆದರೆ, ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಫಿಕ್ಸ್ ಆಗಿದೆ. ಹೀಗಾಗಿ ಕಾಂಗ್ರೆಸ್​​​ನಲ್ಲಿ ಸಿಎಂ ಹುದ್ದೆಗೆ ಸ್ಪರ್ಧೆ ಶುರುವಾಗಿದೆ. ಕಾಂಗ್ರೆಸ್​ನಲ್ಲಿ 1 ಡಜನ್​ಗೂ ಹೆಚ್ಚು ಸಚಿವರು ಸಿಎಂ ಆಕಾಂಕ್ಷಿಗಳಿದ್ದಾರೆ ಎಂದು ಸಿಟಿ ರವಿ ಹೇಳಿದರು.

ಈ ಮಧ್ಯೆ, ದೀಪಾವಳಿ ಒಳಗೆ ಸರ್ಕಾರ ಪತನ ಎಂದು ಎಂಬ ಸಿಟಿ ರವಿ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಆರ್​.ಅಶೋಕ್​​​ ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್​​ ರಾಕೆಟ್​​​ ಹಾರಿಸೋದು, ಪಟಾಕಿ ಹೊಡೆಯುವುದು ಖಚಿತ. ಯಾವಾಗ ಪಟಾಕಿ ಹೊಡೆದು ರಾಕೆಟ್ ಹಾರಿಸುತ್ತಾರೋ ಗೊತ್ತಿಲ್ಲ ಎಂದು ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More