ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ; ವಿವಾದಕ್ಕೀಡಾಯ್ತು ವಿಡಿಯೋ
ಬಿಜೆಪಿ ನಾಯಕಿ ಮಾಧವಿ ಲತಾ ಕೊಂಪೆಲ್ಲಾ ದೇವಿಯ ಶ್ಲೋಕಗಳನ್ನು ಪಠಿಸುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಕೋಣೆಯಲ್ಲಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ. ಈ ಕ್ಲಿಪ್‌ನಲ್ಲಿ, ವಿಮಾನ ನಿಲ್ದಾಣದ ಪ್ರಾರ್ಥನಾ ಸ್ಥಳದೊಳಗೆ ಮಾಧವಿ ಲತಾ "ದುರ್ಗಾ ಸೂಕ್ತಂ"ನ ಶ್ಲೋಕಗಳನ್ನು ಪಠಿಸುತ್ತಿರುವುದನ್ನು ಕಾಣಬಹುದು.
ನವದೆಹಲಿ, ಮಾರ್ಚ್ 25: ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ (BJP) ನಾಯಕಿ ಮಾಧವಿ ಲತಾ (Madhavi Latha) ಅವರು ಪ್ರಾರ್ಥನೆ ಮಾಡಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದ ಮಹಿಳಾ ಪ್ರಾರ್ಥನಾ ಕೊಠಡಿಯೊಳಗೆ ಮಾಧವಿ ಲತಾ ಮುಸ್ಲಿಂ ಮಹಿಳೆಯರೊಂದಿಗೆ ಕುಳಿತು ದೇವರ ಶ್ಲೋಕಗಳನ್ನು ಹೇಳಿದ್ದಾರೆ. ವಿಮಾನ ನಿಲ್ದಾಣದ ಪ್ರಾರ್ಥನಾ ಸ್ಥಳದೊಳಗೆ ಮಾಧವಿ ಲತಾ “ದುರ್ಗಾ ಸೂಕ್ತಂ”ನ ಶ್ಲೋಕಗಳನ್ನು ಪಠಿಸಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವರು ಅವರಿಗೆ ಬೆಂಬಲ ನೀಡಿದ್ದರೆ ಇನ್ನು ಕೆಲವರು ವಿರೋಧಿಸಿದ್ದಾರೆ. ಈ ವಿಡಿಯೋ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

