ಡಿಕೆ ಶಿವಕುಮಾರ್ ನಿವಾಸಕ್ಕೆ ದಿಢೀರ್ ದೌಡಾಯಿಸಿದ ರೇಣುಕಾಚಾರ್ಯ: 20 ನಿಮಿಷ ಮಾತುತೆ ಬಳಿಕ ಹೇಳಿದ್ದೇನು ನೋಡಿ
ಮಾಜಿ ಶಾಸಕ ರೇಣುಕಾಚಾರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ, ಭದ್ರಾ ಜಲಾಶಯವನ್ನು ಕೆಎನ್ಎನ್ಎಲ್ ಅಡಿಯಲ್ಲಿ ಉಳಿಸುವಂತೆ ಮನವಿ ಡಿಕೆಶಿಗೆ ರೇಣುಕಾಚಾರ್ಯ ಮಾಡಿದ್ದಾರೆ. ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸಿದರೆ ದಾವಣಗೆರೆ ಜಿಲ್ಲೆಯ ನೀರಾವರಿ ಹಕ್ಕುಗಳಿಗೆ ಧಕ್ಕೆ ಆಗಲಿದೆ ಎಂದು ರೇಣುಕಾಚಾರ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಜನವರಿ 3: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ಭೇಟಿ ವೇಳೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಿದ್ದಾರೆ.
Published on: Jan 03, 2026 01:02 PM
Latest Videos

