ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ಲ್ಯಾಪ್‌ಟಾಪ್‌ನಲ್ಲಿ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್

Updated on: Dec 04, 2025 | 5:27 PM

ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್​​ ಆರೋಪ ಮಾಡಿದ್ದ ಕಾಂಗ್ರೆಸ್​​ಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆರ್ ಅಶೋಕ್ ಅವರು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದನ್ನು ಲ್ಯಾಪ್​​ಟಾಲ್​​ನಲ್ಲಿ ತೋರಿಸಿದರು.

ಬೆಂಗಳೂರು, (ಡಿಸೆಂಬರ್ 04): ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು, ಒಟ್ಟಾರೆ ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ವಿಪಕ್ಷ ಬಿಜೆಪಿ ಈ ಹೇಳಿಕೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಮುಡಾ ಹಗರಣದಲ್ಲಿ ಸಾಕ್ಷಿ ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೇಳಿಕೆಯನ್ನು ಮುಂದಿಟ್ಟು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸುದ್ದಿಗೋಷ್ಠಿಯಲ್ಲಿ ಆರ್ ಅಶೋಕ್ ಅವರು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದನ್ನು ಲ್ಯಾಪ್​​ಟಾಲ್​​ನಲ್ಲಿ ತೋರಿಸಿದರು.