Loading video

ಪ್ರತಾಪ್​ ಸಿಂಹ ಸಿದ್ದರಾಮಯ್ಯಗೆ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ವಾಗ್ದಾಳಿ

| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2024 | 3:33 PM

ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡಲು ನಗರ ಪಾಲಿಕೆ ಮುಂದಾಗಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಾಮಾಜಿಕ ಕಾರ್ಯಕರ್ತರು ಮತ್ತು ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೆ, ಬಿಜೆಪಿ ನಾಯಕ ಪ್ರತಾಪ್ ಸಿಂಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಅವರು ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು, (ಡಿಸೆಂಬರ್ 26): ಮೈಸೂರಿನ ಹೃದಯಭಾಗದಲ್ಲಿರುವ ಒಂಟಿಕೊಪ್ಪಲ್ ಲಕ್ಷೀ ವೆಂಕಟೇಶ್ವರ ದೇವಸ್ಥಾನದಿಂದ ರಾಯಲ್ ಇನ್ ಹೋಟೆಲ್‌ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಲು ಪಾಲಿಕೆ ಮುಂದಾಗಿದೆ. ಇದಕ್ಕೆ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಆದ್ರೆ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮ್ಯಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಅವರು ಎರಡು ಬಾರಿ ಸಿಎಂ ಆಗಿದ್ದವರು. ಮೈಸೂರು ಜಿಲ್ಲೆಯ ಸುಪುತ್ರ. ಅವರ ಹೆಸರು ಇಡುವುದರಲ್ಲಿ ತಪ್ಪೇನು ಎಂದು ಸಿದ್ದರಾಮಯ್ಯ ಪರ ಧ್ವನಿ ಎತ್ತಿದ್ದಾರೆ. ಆದ್ರೆ, ಇದೀಗ ಇದಕ್ಕೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ. ಪ್ರತಾಪ್ ಸಿಂಹ ಬಕೆಟ್ ಹಿಡಿಯೋದು ನಿಲ್ಲಿಸಿಲಿ. ಸಿದ್ದರಾಮಯ್ಯಗೆ ಬಕೆಟ್ ಹಿಡಿಯುವ ಕೆಲಸವನ್ನು ಪ್ರತಾಪ್ ಸಿಂಹ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ವಾಗ್ದಾಳಿ ನಡೆಸಿದ್ದಾರೆ.