AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಚುನಾಯಿತ ಸರ್ಕಾರಗಳನ್ನು ಉರುಳಿಸುವುದರಲ್ಲಿ ಬಿಜೆಪಿ ಎತ್ತಿದ ಕೈ: ಕೃಷ್ಣ ಭೈರೇಗೌಡ, ಕಂದಾಯ ಸಚಿವ

Bengaluru News: ಚುನಾಯಿತ ಸರ್ಕಾರಗಳನ್ನು ಉರುಳಿಸುವುದರಲ್ಲಿ ಬಿಜೆಪಿ ಎತ್ತಿದ ಕೈ: ಕೃಷ್ಣ ಭೈರೇಗೌಡ, ಕಂದಾಯ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 24, 2023 | 6:46 PM

ದೇಶದ ಹಲವಾರು ಭಾಗಗಳ ರಾಜ್ಯ ಸರ್ಕಾರಗಳನ್ನು ಅದು ಬೀಳಿಸಿದೆ, ಇದು ಎಲ್ಲರಿಗೂ ಗೊತ್ತಿರುವ ವಿಷಯವೇ ಎಂದು ಸಚಿವ ಹೇಳಿದರು.

ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸಿಂಗಪೂರನಿಂದ ರಾಜ್ಯ ಸರ್ಕಾರ ಉರುಳಿಸಿಸುವ ಪ್ರಯತ್ನ ನಡೆಸುತ್ತಿರುವ ಅರೋಪದ ಬಗ್ಗೆ ಡಿಕೆ ಶಿವಕುಮಾರ್ (DK Shivakumar) ಇಂದು ನೀಡಿದ ಹೇಳಿಕೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನಡೆದ ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda), ನಮ್ಮ ಶಾಸಕರ ಬಗ್ಗೆ ವಿಶ್ವಾಸವಿದೆ ಅದರೂ ನಮ್ಮ ಎಚ್ಚರಿಕೆಯಲ್ಲಿ ನಾವಿರಬೇಕು ಎಂದು ಹೇಳಿದರು. ಚುನಾಯಿತ ಸರ್ಕಾರಗಳನ್ನು ಉರುಳಿಸುವುದನ್ನು ಬಿಜೆಪಿ ಕರಗತ ಮಾಡಿಕೊಂಡಿದೆ. ದೇಶದ ಹಲವಾರು ಭಾಗಗಳ ರಾಜ್ಯ ಸರ್ಕಾರಗಳನ್ನು ಅದು ಬೀಳಿಸಿದೆ, ಇದು ಎಲ್ಲರಿಗೂ ಗೊತ್ತಿರುವ ವಿಷಯವೇ ಎಂದು ಸಚಿವ ಹೇಳಿದರು. ಬಿಜೆಪಿಯ ನಾಯಕರರಿಬ್ಬರು ಕೆಲ ದಿನಗಳ ಹಿಂದೆ ಲೋಕಸಭೆಯ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉರುಳುತ್ತದೆ ಅಂತ ಹೇಳಿದ್ದರು, ಅದಕ್ಕಾಗಿ ಅವರ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ ಆಶ್ಚರ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ವ್ಯಂಗ್ಯವಾಗಿ ನಗುತ್ತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ