ಬಿಜೆಪಿ ನಾಯಕರು ಹೇಡಿಗಳು, ನಮಗೆ ಹೆದರುತ್ತಿದ್ದಾರೆ; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಗಾರಿಕೆ, ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜಾಜಿ ಮಾರ್ಗದಿಂದ ಲೋಕ್ ಕಲ್ಯಾಣ್ ಮಾರ್ಗದತ್ತ ಮೆರವಣಿಗೆ ನಡೆಸಿದರು. ಪೋಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದರು.
ನವದೆಹಲಿ, ಜುಲೈ 21: ನೀಟ್-ಯುಜಿ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿಯವರನ್ನು (Rahul Gandhi) ಬಂಧಿಸಲಾಗಿತ್ತು. ತಮ್ಮನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ನಂತರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಭಯದಿಂದ ಈ ರೀತಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಗಾರಿಕೆ, ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜಾಜಿ ಮಾರ್ಗದಿಂದ ಲೋಕ್ ಕಲ್ಯಾಣ್ ಮಾರ್ಗದತ್ತ ಮೆರವಣಿಗೆ ನಡೆಸಿದರು. ಪೋಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದರು.
“ಬಿಜೆಪಿ ನಾಯಕರು ಹೇಡಿಗಳು. ಅವರು ಭಯಪಟ್ಟಿದ್ದಾರೆ. ನಾವು ಅವರಿಗೆ ಹೆದರುವುದಿಲ್ಲ. ಅವರೇ ನಮಗೆ ಹೆದರುತ್ತಿದ್ದಾರೆ. ಈ ಹೋರಾಟದಿಂದ ನಾವು ಹಿಂದೆ ಸರಿಯುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಗುಡುಗಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ