ಸಿಎಂ ತವರು ಜಿಲ್ಲೆಯಿಂದಲೇ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಿದ ಬಿಜೆಪಿ ನಾಯಕರು

Updated on: Apr 07, 2025 | 7:12 PM

ರಾಜ್ಯ ಬಿಜೆಪಿಯ ಮತ್ತೊಂದು ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು. ಆದರೆ ಬಸನಗೌಡ ಯತ್ನಾಳ್ ಬಣದ ಭಾಗವಾಗಿದ್ದ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಇತರ ನಾಯಕರು ಕಾಣಿಸಲಿಲ್ಲ. ಬಿಜೆಪಿ ಆರಂಭಿಸಿರುವ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ನಾಲ್ಕು ಹಂತಗಳಲ್ಲಿ ನಡೆಯಲಿದೆ.

ಮೈಸೂರು: ಬೆಲೆಯೇರಿಕೆ, ಮುಸ್ಲಿಂ ಓಲೈಕೆ (Muslim appeasement) ಮತ್ತು ದಲಿತರಿಗಾಗಿ ಮೀಸಲಿಟ್ಟ ಹಣ ಬೇರೆ ಕಾರ್ಯಗಳಿಗೆ ಉಪಯೋಗಿಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಿಂದ ಜನಾಕ್ರೋಶ ಯಾತ್ರೆಯನ್ನು ಆರಂಭಿಸಿದರು. ಮೈಸೂರು ನಗರದ ಲಷ್ಕರ್ ಮೊಹಲ್ಲಾದ ಅಂಚೆ ಕಚೇರಿ ಬಳಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ನಗಾರಿಯನ್ನು ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಜೋಶಿಯವರಲ್ಲದೆ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಬಿವೈ ವಿಜಯೇಂದ್ರ, ಆರ್ ಅಶೋಕ ಮುಂತಾದವರು ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ:  ಅಶ್ವಿನಿ ವೈಷ್ಣವ್​ರನ್ನ ಭೇಟಿ ಮಾಡಿದ ಯದುವೀರ್: ಮೈಸೂರು ರೈಲ್ವೆ ಯೋಜನೆಗಳನ್ನ ತ್ವರಿತವಾಗಿ ಪೂರ್ಣಗೊಳಿಸಲು ಮನವಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ