ಬಿಜೆಪಿ ನಾಯಕರು ಶೆಟ್ಟರ್ ದುಂಬಾಲು ಬಿದ್ದಿರೋದು ಆ ಪಕ್ಷ ದುರ್ಬಲಗೊಂಡಿರುವುದಕ್ಕೆ ಸಾಕ್ಷಿ: ಡಿಕೆ ಶಿವಕುಮಾರ್

Updated on: Jan 24, 2024 | 4:28 PM

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಒಂದೇ ಕಾರಣದಿಂದ ತಮ್ಮ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಆದರೆ, ಕುಮಾರಸ್ವಾಮಿಯವರೇ ಈಗ ಬಿಜೆಪಿಯನ್ನು ತಬ್ಬಿಕೊಂಡಿರೋದು ಎರಡೂ ಪಕ್ಷಗಳಲ್ಲಿ ನಾಯಕತ್ವದ ಕೊರತೆಯನ್ನು ಸೂಚಿಸುತ್ತದೆ ಎಂದು ಶಿವಕುಮಾರ್ ಹೇಳಿದರು.

ಮಡಿಕೇರಿ: ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳಲ್ಲಿ ನಾಯಕತ್ವದ ಕೊರತೆ ಉಂಟಾಗಿದೆ ಮತ್ತು ರಾಜ್ಯದಲ್ಲಿ ಬಿಜೆಪಿ ದುರ್ಬಲಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಹೆಚ್ ಸಿ ಮಹಾದೇವಪ್ಪ (HC Mahadevappa) ಮತ್ತು ಬೇರೆ ಕೆಲ ನಾಯಕರೊಂದಿಗೆ ಇವತ್ತು ಮಡಿಕೇರಿಯಲ್ಲಿದ್ದ ಶಿವಕುಮಾರ್; ಜಗದೀಶ್ ಶೆಟ್ಟರ್ ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ, ಆದರೆ ಅವರನ್ನು ಬಿಜೆಪಿಗೆ ವಾಪಸ್ಸು ಕರೆದೊಯ್ಯಲು ಆ ಪಕ್ಷದ ನಾಯಕರು ಕಸರತ್ತು ನಡೆಸಿದ್ದಾರೆ, ಬಿಜೆಪಿಯ ಹಲವಾರು ನಾಯಕರು ಶೆಟ್ಟರ್ ಅವರನ್ನು ಭೇಟಿಯಾಗತ್ತಿರುವ ವಿಷಯ ತಮಗೆ ಗೊತ್ತಿದೆ ಎಂದು ಹೇಳಿ ಇದರಿಂದ ಬಿಜೆಪಿ ಎಷ್ಟು ದುರ್ಬಲಗೊಂಡಿದೆ ಅನ್ನೋದು ಗೊತ್ತಾಗುತ್ತದೆ ಎಂದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಒಂದೇ ಕಾರಣದಿಂದ ತಮ್ಮ ಪಕ್ಷ ಜೆಡಿಎಸ್  ಜೊತೆ ಮೈತ್ರಿ ಮಾಡಿಕೊಂಡು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಆದರೆ, ಕುಮಾರಸ್ವಾಮಿಯವರೇ ಈಗ ಹೋಗಿ ಬಿಜೆಪಿಯನ್ನು ತಬ್ಬಿಕೊಂಡಿದ್ದಾರೆ, ಇದರರ್ಥ ಎರಡೂ ಪಕ್ಷಗಳಲ್ಲಿ ನಾಯಕತ್ವದ ಕೊರತೆ ಇದೆ ಮತ್ತು ಚುನಾವಣೆ ಎದುರಿಸಲು ಬೇಕಿರುವ ಆತ್ಮವಿಶ್ವಾಸ ಅವರಲ್ಲಿಲ್ಲ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More