ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Updated on: Dec 09, 2025 | 2:24 PM

ಬೆಳಗಾವಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಬಿಜೆಪಿ ನಾಯಕರು ಹಾಗೂ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ವಿಡಿಯೋ ಇಲ್ಲಿದೆ.

ಬೆಳಗಾವಿ, ಡಿಸೆಂಬರ್ 9: ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ರೈತರ ಪ್ರತಿಭಟನೆ ತೀವ್ರಗೊಂಡಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬೆಳಗಾವಿಯ ಮಾಲಿನಿ ಸಿಟಿಯಿಂದ ಹೊರಟ ಬಿಜೆಪಿ ನಾಯಕರು, ರೈತರು ಕಾಂಗ್ರೆಸ್​ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ, ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ