Karnataka Assembly Polls; ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರು ಪೇಚಿಗೆ ಸಿಕ್ಕಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

Karnataka Assembly Polls; ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರು ಪೇಚಿಗೆ ಸಿಕ್ಕಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 12, 2023 | 2:31 PM

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಬಯಸುತ್ತಿರುವುದಕ್ಕೆ ಹಲವು ಕಾರಣಗಳಿವೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು,

ಮೈಸೂರು: ವಿ ಸೋಮಣ್ಣ (V Somanna) ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯನವರಾಗಲೀ (Siddaramaiah) ಮತ್ತು ಅವರಿಗಾಗಿ ಕ್ಷೇತ್ರ ಬಿಟ್ಟುಕೊಟ್ಟಿರುವ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರಾಗಲೀ (Yathindra Siddaramaiah) ತಲೆಕೆಡಿಸಿಕೊಂಡಂತಿಲ್ಲ. ಮೈಸೂರಲ್ಲಿ ಇಂದು ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿದ ಯತೀಂದ್ರ ಸಿದ್ದರಾಮಯ್ಯ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಬಯಸುತ್ತಿರುವುದಕ್ಕೆ ಹಲವು ಕಾರಣಗಳಿವೆ. ಕೋಲಾರ ಮಾತ್ರವಲ್ಲ ಬೇರೆ ಹಲವಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರು ಅವರಗೆ ಕ್ಷೇತ್ರ ಬಿಟ್ಟುಕೊಡಲು ತಯಾರಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧಿಸುವುದನ್ನು ಸೋಲಿನ ಭೀತಿ ಅಂತ ಟೀಕಿಸುತ್ತಿದ್ದ ಬಿಜೆಪಿ ನಾಯಕರು ತಾವೇ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ಇಬ್ಬಂದಿತನ ಪ್ರದರ್ಶಿಸುತ್ತಿದ್ದಾರೆ ಎಂದು ಯತೀಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 12, 2023 02:31 PM